Visit Channel

‘ಕುಶ’ ಈಗ ಬಂಧ ಮುಕ್ತ: ಕಾಡಿನತ್ತ ಹೆಜ್ಜೆಯಿಟ್ಟ ಗಜ

WhatsApp Image 2021-06-04 at 6.11.24 PM

ಚಾಮರಾಜನಗರ, ಜೂ. 04: ಕುಶ ಆನೆಯನ್ನು ದುಬಾರೆ ಶಿಬಿರದಿಂದ ಕರೆದೊಯ್ದು ನೆನ್ನೆ ಸಂಜೆ ಅರಣ್ಯ ಪ್ರದೇಶ ದಲ್ಲಿ ಬಿಡುಗಡೆ ಮಾಡಲಾಗಿದೆ, ಇದರಿಂದ ಕುಶ ಬಂಧಮುಕ್ತ ನಾಗಿದ್ದಾನೆ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ವಶದಲ್ಲಿದ್ದ ಆನೆ ಕುಶ ನನ್ನು ಸ್ವತಂತ್ರವಾಗಿ ಅರಣ್ಯದಲ್ಲಿ ಬಿಡಲು ಈ ಹಿಂದೆ ನಡೆದ ಸಭೆಯಲ್ಲಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು‌. ಅದರಂತೆ ಅಗತ್ಯ ಸಿದ್ಧತೆಗಳನ್ನು ನಡೆಸಿ ಕುಶ ನನ್ನು ಬಿಡುಗಡೆ ಮಾಡಬೇಕಾದ ಪ್ರದೇಶವನ್ನು ಗುರುತಿಸಿ, ಅದಕ್ಕೆ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದೆ
ಎಂದು ತಿಳಿಸಿದ್ದಾರೆ.

ವಲಯಾರಣ್ಯಾಧಿಕಾರಿ ಅನನ್ಯ ಕುಮಾರ್ ಜೆ, ಉಪ ವಲಯ ಅರಣ್ಯಾಧಿಕಾರಿ ಕೆ ಪಿ ರಂಜನ್ ಹಾಗೂ ಅರಣ್ಯ ಪಶುವೈದ್ಯಾಧಿಕಾರಿ ಡಾಕ್ಟರ್ ವಾಸಿಂ ಮಿರ್ಜಾ ಹಾಗೂ ಅರಣ್ಯ ಇಲಾಖೆಯ ಇತರ ಅಧಿಕಾರಿಗಳು ಕುಶ ಬಿಡುಗಡೆಯ ಸಂದರ್ಭದಲ್ಲಿ ಹಾಜರಿದ್ದು ಬೀಳ್ಕೊಟ್ಟರು.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.