2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, 3 ರಾಜ್ಯಗಳಲ್ಲಿ 40 ಸ್ಥಾನಗಳನ್ನು ಕಳೆದುಕೊಳ್ಳಲಿದೆ : ಜೆಡಿಯು ಮುಖ್ಯಸ್ಥ

JDU

ನವದೆಹಲಿ : 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ(Loksabha Elections) ಬಿಜೆಪಿಯನ್ನು(BJP) ಅಧಿಕಾರದಿಂದ ಕಿತ್ತೊಗೆಯಲಾಗುವುದು ಮತ್ತು 2019ರ ಲೋಕಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ತಾನು ಗೆದ್ದಿದ್ದ 40 ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಜೆಡಿಯು ಅಧ್ಯಕ್ಷ(JDU President) ಲಾಲನ್ ಸಿಂಗ್(Lalan Singh) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್(Lalu Prasad Yadav) ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಯು ಅಧ್ಯಕ್ಷ ಲಾಲನ್ ಸಿಂಗ್, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 2019ರ ಗೆಲುವಿನ ಲೆಕ್ಕಾಚಾರದಿಂದ ಬಿಜೆಪಿ 40 ಲೋಕಸಭಾ ಸ್ಥಾನಗಳನ್ನು ಕಳೆದುಕೊಳ್ಳಲಿದೆ. 2024ರ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆಯಬೇಕು ಎಂದು ನಾನು ಲಾಲೂಜಿ ಅವರಿಂದ ಆಶೀರ್ವಾದ ಪಡೆದಿದ್ದೇನೆ.  

2019ರಲ್ಲಿ ಎನ್ಡಿಎ(NDA) 303 ಸ್ಥಾನಗಳನ್ನು ಗೆದ್ದಿದೆ. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಆ ಸಂಖ್ಯೆಯನ್ನು ಇಳಿಸಲು ನಾವು ಗುರಿ ಹೊಂದಿದ್ದೇವೆ.  ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಈ ಮೂರು ರಾಜ್ಯಗಳಲ್ಲೇ ಬಿಜೆಪಿ 40 ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ. 2019 ರಲ್ಲಿ ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಈ ಮೂರು ರಾಜ್ಯಗಳಲ್ಲೇ  ಬಿಜೆಪಿ 47 ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು.

ಇದೀಗ ಯುಪಿಎ(UPA) ಮೈತ್ರಿಕೂಟ ಈ ಮೂರು ರಾಜ್ಯಗಳಲ್ಲಿ ಪ್ರಬಲವಾಗಿದ್ದು, ಬಿಜೆಪಿಗೆ ಭಾರೀ ಪ್ರತಿರೋಧ ನೀಡಲಿದೆ ಎಂದಿದ್ದಾರೆ. ಇನ್ನು ಬಿಹಾರದಲ್ಲಿ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ತೊರೆದು, ಆರ್ಜೆಡಿ ಮತ್ತು ಕಾಂಗ್ರೆಸ್ನೊಂದಿಗೆ ಸೇರಿ ಹೊಸ ಸರ್ಕಾರ ರಚಿಸಿದೆ. ಹೀಗಾಗಿ ನಿತೀಶ್ ಕುಮಾರ್(Nithish Kumar) ಅವರು ಮೈತ್ರಿಧರ್ಮಕ್ಕೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಬಿಹಾರದಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ.

.

Exit mobile version