RJD ಮುಖ್ಯಸ್ಥ ಲಾಲು ಪ್ರಸಾದ್ಗೆ ಕಿಡ್ನಿ ದಾನ ಮಾಡಲು ಮುಂದಾದ ಮಗಳು ರೋಹಿಣಿ

Patna : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಆರ್‌ಜೆಡಿ ಮುಖ್ಯಸ್ಥ(Lalu Prasad kidney Transplant) ಲಾಲು ಪ್ರಸಾದ್‌ ಯಾದವ ಕಿಡ್ನಿ ಕಸಿ ಮಾಡಿಸಿಕೊಳ್ಳಲು ಮುಂದಾಗಿದ್ದು, ಲಾಲು ಪುತ್ರಿ ರೋಹಿಣಿ ತಂದೆಗೆ ತನ್ನ ಒಂದು ಕಿಡ್ನಿ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇನ್ನು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್(Lalu Prasad kidney Transplant) ಅವರು ಕಳೆದ ಹಲವಾರು ವರ್ಷಗಳಿಂದ ಮೂತ್ರಪಿಂಡದ ಕಾಯಿಲೆ ಮತ್ತು ಇತರ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

https://youtu.be/c-fK_yfBAok

ಕೆಲ ತಿಂಗಳ ಹಿಂದೆ ಲಾಲು ಪ್ರಸಾದ್‌ ಯಾದವ ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದು, ಚಿಕಿತ್ಸೆಗಾಗಿ ಕುಟುಂಬದೊಂದಿಗೆ ಸಿಂಗಾಪುರಕ್ಕೆ ತೆರಳಿದ್ದರು.

ಅಕ್ಟೋಬರ್‌ನಲ್ಲಿ ಸಿಂಗಾಪುರಕ್ಕೆ(Singapore) ಭೇಟಿ ನೀಡಿದ ಸಂದರ್ಭದಲ್ಲಿ ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಿಂಗಾಪುರದ ವೈದ್ಯರು ಸಲಹೆ ನೀಡಿದ ನಂತರ ರೋಹಿಣಿ ತನ್ನ ಒಂದು ಮೂತ್ರಪಿಂಡವನ್ನು ತನ್ನ ತಂದೆಗೆ ದಾನ ಮಾಡಲು ಮುಂದಾಗಿದ್ದಾರೆ.

ಆದರೆ ತನ್ನ ಜೀವ ಉಳಿಸಲು ಮಗಳು ರೋಹಿಣಿ ತನ್ನ ಕಿಡ್ನಿ ದಾನ ಮಾಡಲು ಮುಂದಾದಾಗ ಲಾಲು ಪ್ರಸಾದ್ ಆರಂಭದಲ್ಲಿ ಇದಕ್ಕೆ ಒಪ್ಪಿಕೊಂಡಿರಲಿಲ್ಲ. 

ಇದನ್ನೂ ಓದಿ : https://vijayatimes.com/amitabh-remembers-appu-smile/

ನಂತರ ಮಗಳ ಒತ್ತಡ ಮತ್ತು ಕುಟುಂಬ ಸದಸ್ಯರ ಸಲಹೆಯ ನಂತರ ಲಾಲು ಪ್ರಸಾದ್‌ ಯಾದವ ಕಿಡ್ನಿ ಕಸಿ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದೆ ತಿಂಗಳ (ನವೆಂಬರ್) 20-24ರ ನಡುವೆ ಲಾಲು ಪ್ರಸಾದ್ ಅವರು ಮತ್ತೆ ಸಿಂಗಾಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಸಮಯದಲ್ಲಿ ಅವರು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ.

ಸಿಂಗಾಪುರದಲ್ಲಿಯೇ ನೆಲೆಸಿರುವ ಲಾಲು ಅವರ ಎರಡನೇ ಪುತ್ರಿ ರೋಹಿಣಿ ಅವರು ತಮ್ಮ ತಂದೆಯ ಮೂತ್ರಪಿಂಡದ ಕಾಯಿಲೆಯ ಬಗ್ಗೆ ತುಂಬಾ ಚಿಂತಿತರಾಗಿದ್ದರು ಮತ್ತು,

ಮೂತ್ರಪಿಂಡ ಕಸಿ ಸಲಹೆ ನೀಡಿದ ವೈದ್ಯರ ತಂಡವನ್ನು ಸಂಪರ್ಕಿಸಲು ಲಾಲು ಸಿಂಗಾಪುರಕ್ಕೆ ಭೇಟಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕಿಡ್ನಿ ಸಮಸ್ಯೆಯಿಂದ ಕಳೆದ ಹಲವು ವರ್ಷಗಳಿಂದ ದೆಹಲಿ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಅವರಿಗೆ ಎಐಐಎಂಎಸ್‌ನ ವೈದ್ಯರು ಕಿಡ್ನಿ ಕಸಿ ಮಾಡುವಂತೆ ಸಲಹೆ ನೀಡಿರಲಿಲ್ಲ.

ಆದರೆ ಸಿಂಗಾಪುರ ಭೇಟಿ ವೇಳೆ ಅಲ್ಲಿನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

Exit mobile version