ಮೇವು ಹಗರಣದ ಆರೋಪಿ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ

laalu prasad

ಮೇವು ಹಗರಣದ ಅಂತಿಮ ಮತ್ತು ಐದನೇ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ಸೋಮವಾರ 5 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

ಜಾರ್ಖಂಡ್‌ನ ಡೊರಾಂಡಾ ಖಜಾನೆಯಿಂದ 139 ಕೋಟಿಗೂ ಹೆಚ್ಚು ಮೊತ್ತವನ್ನು ಲಪಟಾಯಿಸಿದ ಆರೋಪ ಅವರ ಮೇಲೆ ಇದೆ. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ವಾರ ಈ ಪ್ರಕರಣದಲ್ಲಿ  ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ಘೋಷಿಸಿತ್ತು.

ಲಾಲೂ ಅವರಲ್ಲದೆ, ಮಾಜಿ ಸಂಸದ ಜಗದೀಶ್ ಶರ್ಮಾ, ಅಂದಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಅಧ್ಯಕ್ಷ ಧ್ರುವ ಭಗತ್, ಪಶುಸಂಗೋಪನಾ ಕಾರ್ಯದರ್ಶಿ ಬೆಕ್ ಜೂಲಿಯಸ್ ಮತ್ತು ಪಶುಸಂಗೋಪನಾ ಸಹಾಯಕ ನಿರ್ದೇಶಕ ಡಾ.ಕೆ.ಎಂ.ಪ್ರಸಾದ್ ಕೂಡ ಪ್ರಮುಖ ಆರೋಪಿಗಳು.

ವಿಶೇಷ ನ್ಯಾಯಾಲಯವು ಇತರ 24 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.

1996ರ ಜನವರಿಯಲ್ಲಿ ಪಶುಸಂಗೋಪನಾ ಇಲಾಖೆ ಮೇಲೆ ದಾಳಿ ನಡೆಸಿದ ಬಳಿಕ ಮೇವು ಹಗರಣ ಬೆಳಕಿಗೆ ಬಂದಿತ್ತು. ಸಿಬಿಐ ಜೂನ್ 1997 ರಲ್ಲಿ ಲಾಲೂ ಪ್ರಸಾದ್ ಅವರನ್ನು ಆರೋಪಿ ಎಂದು ಹೆಸರಿಸಿತು.

ಮೇವು ಹಗರಣದ ಹಿನ್ನೆಲೆ :
1996ರ ಜನವರಿಯಲ್ಲಿ ಪಶು ಸಂಗೋಪನಾ ಇಲಾಖೆ ಮೇಲೆ ದಾಳಿ ನಡೆಸಿದ ಬಳಿಕ ಮೇವು ಹಗರಣ ಬೆಳಕಿಗೆ ಬಂದಿತ್ತು. ಸಿಬಿಐ ಜೂನ್ 1997 ರಲ್ಲಿ ಪ್ರಸಾದ್ ಅವರನ್ನು ಆರೋಪಿ ಎಂದು ಹೆಸರಿಸಿತು. ಸಂಸ್ಥೆಯು ಲಾಲು ಮತ್ತು ಮಾಜಿ ಬಿಹಾರ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ವಿರುದ್ಧ ಆರೋಪಗಳನ್ನು ದಾಖಲಿಸಿತು. ಸೆಪ್ಟೆಂಬರ್ 2013 ರಲ್ಲಿ, ವಿಚಾರಣಾ ನ್ಯಾಯಾಲಯವು ಮೇವು ಹಗರಣಕ್ಕೆ ಸಂಬಂಧಿಸಿದ ಒಂದು ಪ್ರಕರಣದಲ್ಲಿ ಲಾಲು, ಮಿಶ್ರಾ ಮತ್ತು ಇತರ 45 ಜನರನ್ನು ದೋಷಿ ಎಂದು ಘೋಷಿಸಿತು ಮತ್ತು ಲಾಲು ಅವರನ್ನು ರಾಂಚಿ ಜೈಲಿನಲ್ಲಿರಿಸಲಾಯಿತು. ಡಿಸೆಂಬರ್ 2013 ರಲ್ಲಿ, ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಲಾಲು ಅವರಿಗೆ ಜಾಮೀನು ನೀಡಿತು. ಡಿಸೆಂಬರ್ 2017 ರಲ್ಲಿ, ಸಿಬಿಐ ನ್ಯಾಯಾಲಯವು ಲಾಲು ಮತ್ತು ಇತರ 15 ಮಂದಿಯನ್ನು ತಪ್ಪಿತಸ್ಥರೆಂದು ಘೋಷಿಸಿ ಬಿರ್ಸಾ ಮುಂಡಾ ಜೈಲಿಗೆ ಕಳುಹಿಸಿತು.

Exit mobile version