Bengaluru: ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ಒಂದೊಂದೇ ಅವ್ಯವಹಾರಗಳು (Affairs) ಬಯಲಾಗುತ್ತಿದೆ. ಕರ್ನಾಟಕ ಭೋವಿ (Karnataka Bhovi) ಅಭಿವೃದ್ಧಿ ನಿಗಮ (Karnataka Bhovi Development Corporation) ಬಹುಕೋಟಿ ಅವ್ಯವಹಾರ ಪ್ರಕರಣದ ತನಿಖೆ ಸಿಐಡಿ (CID) ನಡೆಸುತ್ತಿದ್ದು, ಐದು ಖಾಸಗಿ ಕಂಪನಿಗಳಿಗೆ ಅದರಲ್ಲೂ ನಕಲಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂ. ಹಣ ವರ್ಗಾವಣೆಯಾಗಿರುವುದನ್ನು ಪತ್ತೆಹಚ್ಚಿದೆ. ಅಪರಾಧ ತನಿಖಾ ಇಲಾಖೆ (CID) ತನಿಖೆ ಎದುರಿಸಿದ್ದ ಜೀವ ಅವರ ಖಾತೆಗೆ 7 ಕೋಟಿ 16 ಲಕ್ಷ ರೂ. ಜಮೆಯಾಗಿರುವುದು ಪತ್ತೆಯಾಗಿದೆ.
ಇನ್ನು ಭೋವಿ (Land) ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ (Leelavathi) , ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ (B K Nagarajappa) , ಮಾಜಿ ಅಧೀಕ್ಷಕ ಸುಬ್ಬಪ್ಪ (Subbappa) ಅವರು ತಮ್ಮ ಹೆಸರುಗಳಲ್ಲಿ ಮಾತ್ರವಲ್ಲದೆ ನೆರೆಹೊರೆಯವರು, ಬಾಡಿಗೆದಾರರು ಸಂಬಂಧಿಕರ ಹೆಸರಿನಲ್ಲಿ ನಕಲಿ ಕಂಪನಿ ತೆರೆದಿದ್ದು, ಅವರ ಖಾತೆಗಳಿಗೆ ಕೋಟಿ ಕೋಟಿ ರೂಪಾಯಿ ಹಣ ಜಮೆಮಾಡಿದ್ದಾರೆ. ಇದೀಗ ಇದೇ ಹಗರಣ ಸಂಬಂಧ ಸಿಐಡಿ (CID) ತನಿಖೆ ಎದುರಿಸಿದ್ದ ಉದ್ಯಮಿ ಜೀವಾ ಅವರು, ಐದು ದಿನಗಳ ಹಿಂದೆ ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್‌ನಲ್ಲಿ (Raghavendra Layout, Padmanabhanagar) ಆತ್ಮ*ತ್ಯೆ ಮಾಡಿಕೊಂಡಿದ್ದರು. ಭೋವಿ ಅಕ್ರಮ ಹಣ ವರ್ಗಾವಣೆ ಶೋಧಿಸಿರುವ ಸಿಐಡಿ (CID) , ಅಸ್ತಿತ್ವವೇ ಇಲ್ಲದ ಐದು ಕಂಪನಿಗಳಿಗೆ 34.18 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿರುವುದನ್ನು ಪತ್ತೆಹಚ್ಚಿ ಬೆಂಗಳೂರು ನಗರದಲ್ಲೇ ಕಾರ್ಯಚಟುವಟಿಕೆ ಹೊಂದಿವೆ ಎಂದು ಬಿಂಬಿಸಿಕೊಂಡಿದ್ದ ಈ ಕಂಪನಿಗಳ ಬೆನ್ನತ್ತಿ ಹೋಗಿದ್ದ ಅಧಿಕಾರಿಗಳು, ಕೆಲ ಕಂಪನಿಗಳ ಕಚೇರಿಗಳು ದನದ ಕೊಟ್ಟಿಗೆಯಲ್ಲಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ.
ಸರ್ಕಾರವು ಭೋವಿ ಸಮುದಾಯದ ಅಭ್ಯುದಯಕ್ಕೆ ರೂಪಿಸಿದ್ದ ಆರ್ಥಿಕ ಯೋಜನೆಗಳಲ್ಲಿ ನಿಗಮದ ಕೆಲ ಅಧಿಕಾರಿಗಳು ಭಾರಿ ಭ್ರಷ್ಟಾಚಾರ (Corruption) ನಡೆಸಿದ್ದಾರೆ. 2018-2023ರವರೆಗೆ ಐದು ವರ್ಷಗಳಲ್ಲಿ ಸುಮಾರು 90 ಕೋಟಿಗೂ ಅಧಿಕ ಮೊತ್ತದ ಅಕ್ರಮ ನಡೆದಿರುವುದು ಗೊತ್ತಾಗಿದೆ.ಇದರಲ್ಲಿ ಜೀವಾ ಅವರಿಗೆ ಸೇರಿದ್ದು ಎನ್ನಲಾದ ಅನ್ನಿಕಾ ಎಂಟರ್ ಪ್ರೈಸ್ (Annika Enterprises) ಕಂಪನಿಗೆ 7.16 ಕೋಟಿ ರೂ. ಹಾಗೂ ಅವರ ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್ ಕಂಪನಿಗೆ 3.79 ಕೋಟಿ ರೂ. ಸೇರಿ ಒಟ್ಟು 10.9 ಕೋಟಿ ರೂ., ನಿಗಮದ ಸಿಬ್ಬಂದಿ ಯಶಸ್ವಿನಿ ಅವರಿಗೆ ಸೇರಿದ್ದ ಎನ್ನಲಾದ ಡ್ರೀಮ್ ಎಂಟರ್ ಪ್ರೈಸಸ್ (Dream Enterprises) ಕಂಪನಿಗೆ 8 ಕೋಟಿ 78 ಲಕ್ಷ ರೂ. ಯಶಸ್ವಿನಿ ಸೋದರ ಕಾರ್ತೀಕ್ ಗೌಡ (Yashasvini’s brother Karthik Gowda) ಹೆಸರಿನಲ್ಲಿನ ಆದಿತ್ಯ ಎಂಟರ್ ಪ್ರೈಸಸ್ ಕಂಪನಿಗೆ 4 ಕೋಟಿ 76 ಲಕ್ಷ ಜಮೆಯಾಗಿದೆ.ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಸೋದರಿ ಮಂಗಳ ರಾಮು ಬ್ಯಾಂಕ್ ಅಕೌಂಟ್ ಗೆ 1 ಕೋಟಿ 48 ಲಕ್ಷ ರೂ. ಸಂದಾಯವಾಗಿದೆ. ಈ ಮೂಲಕ ಬರೊಬ್ಬರಿ 90 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ.