“ಹೈಕೋರ್ಟ್(Highcourt) ಹಲವಾರು ಅಪ್ರಸ್ತುತ ಪರಿಗಣನೆಗಳು ಮತ್ತು ಸಮಸ್ಯೆಗಳನ್ನು ಪರಿಗಣನೆಗೆ ತೆಗೆದುಕೊಂಡಿದೆ. ಎಫ್‌ಐಆರ್‌ಗೆ(FIR) ಅನಗತ್ಯ ಪ್ರಯೋಜನವನ್ನು ನೀಡಲು ಯಾವುದೇ ಕಾನೂನು ಅಗತ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್(SupremeCourt) ತನ್ನ ಆದೇಶದಲ್ಲಿ ತಿಳಿಸಿದೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಪ್ರದೇಶದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದ ಪ್ರಮುಖ ಆರೋಪಿ. ಅಕ್ಟೋಬರ್ 9 ರಂದು ಅವರನ್ನು ಬಂಧಿಸಲಾಯಿತು ಮತ್ತು ಈ ವರ್ಷದ ಫೆಬ್ರವರಿಯಲ್ಲಿ ಜಾಮೀನು ನೀಡಲಾಗಿತ್ತು! ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಗೆ ಮುನ್ನ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದರು.
ಟಿಕುನಿಯಾದಲ್ಲಿ ಕಾರ್ಯಕ್ರಮವೊಂದಕ್ಕೆ ಮುನ್ನ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೃಹ ಖಾತೆಯ ರಾಜ್ಯ ಸಚಿವ (MoS) ಪುತ್ರ ಆಶಿಶ್ ಮಿಶ್ರಾ ತಮ್ಮ ಕಾರು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಘಟನೆಯಲ್ಲಿ ನಾಲ್ವರು ರೈತರು ಸಾವನ್ನಪ್ಪಿದರು. ನಾಲ್ವರು ರೈತರ ಮೇಲೆ ಕಾರು ಹರಿಸಿದ ಸಂಧರ್ಭದಲ್ಲಿ ಕಾರನ್ನು ಆಶಿಶ್ ಮಿಶ್ರಾ ಚಾಲನೆ ಮಾಡಿರುವುದು ಸಾಬೀತಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿದರೆ, ಕೇಂದ್ರ ಸಚಿವರ ಪುತ್ರ ಈ ಆರೋಪವನ್ನು ನಿರಾಕರಿಸಿದ್ದಾರೆ.

ಲಖೀಂಪುರ ಖೇರಿ ಹಿಂಸಾಚಾರ ಘಟನೆಯ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಪ್ರತಿಭಟನಾ ನಿರತ ರೈತರ ಹತ್ಯೆಗೆ ಯೋಜಿತ ಸಂಚು ನಡೆದಿದೆ ಎಂದು ಹೇಳಿದೆ. ಇದಕ್ಕೂ ಮುನ್ನ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಆಶಿಶ್ ಮಿಶ್ರಾಗೆ ಜಾಮೀನು ನೀಡಿತ್ತು. ಆದರೆ, ನ್ಯಾಯಾಲಯದ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ!