ಹರಿಯಾಣ, ಡಿ. 05: ಕಳೆದ ಕೆಲವು ದಿನಗಳ ಹಿಂದಷ್ಟೇ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟಿದ್ದ ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ತಮಗೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಂಬಲಾ ಕಾಂಟ್ನಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ. ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಸಚಿವ ಅನಿಲ್ ವಿಜ್ ಅವರು ನ. 20ರಂದು ಇದೇ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ 3ನೇ ಹಂತದ ಪ್ರಯೋಗಕ್ಕೆ ಒಳಪಟ್ಟಿದ್ದರು.