ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೊಮ್ಮೆ ಗಂಭೀರ! ಆಸ್ಪತ್ರೆಗೆ ದಾಖಲು.

lata

ನವದೆಹಲಿ: ಭಾರತದ ಖ್ಯಾತ ಗಾಯಕಿ, ಹಿನ್ನಲೆ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಇಂದು ಮತ್ತೆ ತೀವ್ರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಿಲಾಗಿದೆ. ಈ ಹಿಂದೆಯೂ ಇದೇ ರೀತಿ ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಲತಾ ಮಂಗೇಶ್ಕರ್ ಅವರು ಹುಷಾರಾಗಿ ಮನೆಗೆ ತೆರಳಿದ್ದರು. ಆದರೆ ಇಂದು ಮತ್ತೊಮ್ಮೆ ತೀವ್ರ ಅನಾರೋಗ್ಯದ ಹಿನ್ನಲೆ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಭಾರತದ ನೈಟಿಂಗೇಲ್ ಎಂದೇ ಕರೆಯಲ್ಪಡುವ ಲತಾ ಮಂಗೇಶ್ಕರ್ ಅವರನ್ನು ವೆಂಟಿಲೇಟರ್‌ನಲ್ಲಿ ಅಬ್ಸರ್ ವೇಷನ್ ನಲ್ಲಿ ಇಟ್ಟಿದ್ದಾರೆ.

ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಂಧಾನಿ ಅವರು ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದ್ದು, ಅವರ ಸ್ಥಿತಿ ಇಂದು ಗಂಭೀರವಾಗಿದೆ. ಅವರು ಇನ್ನು ವೆಂಟಿಲೇಟರ್‌ನಲ್ಲಿದ್ದಾರೆ. ವೈದ್ಯರ ಗುಂಪಿನ ಮೇಲ್ವಿಚಾರಣೆಯಲ್ಲಿ ಲತಾ ಮಂಗೇಶ್ಕರ್ ಅವರು ಇದ್ದಾರೆ. ಈ ವರ್ಷದ ಜನವರಿಯಲ್ಲಿ ಕೋವಿಡ್ ಪಾಸಿಟಿವ್ ಪರೀಕ್ಷೆಯಲ್ಲಿ ಪಾಸಿಟಿವ್ ದೃಢವಾದ ತಕ್ಷಣ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 92 ವರ್ಷದ ಗಾನ ಕೋಗಿಲೆಗೆ ಕೋವಿಡ್-19 ನಂತರದಲ್ಲಿ ನ್ಯುಮೋನಿಯಾ ಇರುವುದು ಕೂಡ ಪತ್ತೆಯಾಗಿತ್ತು.

ದಿ ನೈಟಿಂಗೇಲ್ ಆಫ್ ಇಂಡಿಯಾ ಎಂದು ಭಾರತೀಯರು ಲತಾ ಮಂಗೇಶ್ಕರ್ ಅವರನ್ನು ಕರೆದು ಜನರು ಗೌರವಿಸುತ್ತಾರೆ. 1942 ರಲ್ಲಿ ತಮ್ಮ 13 ನೇ ವಯಸ್ಸಿನಲ್ಲಿ ಸುಪ್ರಸಿದ್ಧ ಗಾಯನದಿಂದ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಹಲವಾರು ಭಾರತೀಯ ಭಾಷೆಗಳಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹೆಗ್ಗೆಳಿಕೆ, ಗೌರವ ಅವರಿಗೆ ಸಲ್ಲುತ್ತದೆ. ಮೆಲೋಡಿ ಕ್ವೀನ್ ಆಫ್ ಇಂಡಿಯಾ, ಪದ್ಮಭೂಷಣ ಪ್ರಶಸ್ತಿ, ಪದ್ಮವಿಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಬಹು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳು ಮತ್ತು ಗೌರವಗಳೊಂದಿಗೆ ಲತಾ ಮಂಗೇಶ್ಕರ್ ಅವರನ್ನು ಸನ್ಮಾನಿಸಲಾಗಿದೆ. ಅವರು ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಕೂಡ ಪಡೆದುಕೊಂಡಿದ್ದಾರೆ. ಲತಾ ಮಂಗೇಶ್ಕರ್ ಅವರು ಶೀಘ್ರ ಚೇತರಿಸಿಕೊಳ್ಳಲ್ಲಿ ಎಂದು ನಾವು, ನೀವೆಲ್ಲರೂ ಭಗವಂತನಲ್ಲಿ ಪ್ರಾರ್ಥಿಸಿಕೊಳ್ಳೊಣ.

Exit mobile version