ಕಳೆದ 24 ಗಂಟೆಗಳಲ್ಲಿ 2 ಲಕ್ಷಕ್ಕಿಂತ ಕಡಿಮೆ ಕೊರೋನಾ ಕೇಸ್ ದಾಖಲು

ನವದೆಹಲಿ, ಮೇ. 25: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,96,427 ಹೊಸ ಕೊವಿಡ್ ಪ್ರಕರಣ ದಾಖಲಿಸಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,69,48,874 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದೇ ಅವಧಿಯಲ್ಲಿ 3,511 ಸಾವುಗಳು ದಾಖಲಾಗಿದ್ದು ದೇಶದಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ ಇದು 3,07,231 ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 133,934 ರಷ್ಟು ಕಡಿಮೆಯಾಗಿದ್ದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,58,67,782 ಕ್ಕೆ ತಲುಪಿದೆ.

ನಿನ್ನೆ ಪರೀಕ್ಷಿಸಿದ 20,58,112 ಮಾದರಿಗಳನ್ನು ಒಳಗೊಂಡಂತೆ ಮೇ 24 ರವರೆಗೆ ಒಟ್ಟು 33,25,94,176 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.

ಕೊರೊನಾವೈರಸ್ ಸೋಂಕು ಹರಡದಂತೆ ತಡೆಯಲು ಹಲವಾರು ರಾಜ್ಯಗಳು ಲಾಕ್ಡೌನ್ ಹೇರಿವೆ. ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಕರ್ನಾಟಕ, ತೆಲಂಗಾಣ, ಉತ್ತರ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ, ಮೇಘಾಲಯ, ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಗೋವಾ ಮತ್ತೆ ಕರ್ಫ್ಯೂ ತರಹದ ನಿರ್ಬಂಧಗಳನ್ನು ವಿಧಿಸಿದ ನಂತರ ಸಕ್ರಿಯ ಪ್ರಕರಣಗಳು ಇಳಿಮುಖವಾಗಿವೆ.

Exit mobile version