• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮುಖ್ಯಮಂತ್ರಿ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
ಮುಖ್ಯಮಂತ್ರಿ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು : ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

Bengaluru : ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬೊಮ್ಮಾಯಿ(Let Bommai Resign) ಅವರು ತಕ್ಷಣ ರಾಜೀನಾಮೆ ನೀಡಬೇಕು.

Basavaraj bommai

ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Let Bommai Resign) ಟ್ವೀಟ್‌ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಮುಖ್ಯಮಂತ್ರಿ ಬೊಮ್ಮಾಯಿ, ಬಿಬಿಎಂಪಿ ಆಯುಕ್ತರು ಹಾಗೂ ಇತರರ ವಿರುದ್ಧ ಇಂದೇ ದೂರು ದಾಖಲಿಸುತ್ತೇವೆ.

ಈ ಕೂಡಲೇ ಬಸವರಾಜ ಬೊಮ್ಮಾಯಿ ಅವರನ್ನು ಬಂಧಿಸಬೇಕು. ಒಂದು ವೇಳೆ ಅವರ ವಿರುದ್ಧ ಎಫ್ಐಆರ್ ದಾಖಲಿಸದಿದ್ದರೆ ಮುಂದಿನ ಕ್ರಮವನ್ನು ನಾವು ಕೈಗೊಳ್ಳುತ್ತೇವೆ.

siddu

ಬೆಂಗಳೂರು ಮಹಾನಗರಪಾಲಿಕೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಈ ಹಗರಣವನ್ನು ನಡೆಸಿರುವಂತೆ ಮೇಲ್ನೊಟಕ್ಕೆ ಕಾಣುತ್ತಿದ್ದರೂ,

ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಇಡೀ ರಾಜ್ಯಕ್ಕೆ ಈ ಆಪರೇಷನ್ ವಿಸ್ತರಿಸುವ ದುರುದ್ದೇಶ ಇದ್ದಂತಿದೆ ಎಂದು ಟೀಕಿಸಿದ್ದಾರೆ.

ಇಂತಹ ಹಗರಣಗಳಿಂದ ಜನತೆ ಚುನಾವಣಾ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳಲಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಕೇಂದ್ರ ಚುನಾವಣಾ ಆಯೋಗ ತಕ್ಷಣ ಮಧ್ಯಪ್ರವೇಶಿಸಿ ತನಿಖೆಯಲ್ಲಿ ಸಹಕಾರ ನೀಡಬೇಕು.

 40% ಭ್ರಷ್ಟಾಚಾರ(Corruption) ಮತ್ತು ಆಂತರಿಕ ಬಿಕ್ಕಟ್ಟಿನಲ್ಲಿ ಮುಳುಗಿಹೋಗಿರುವ ಬಿಜೆಪಿ ಸರ್ಕಾರ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ವಿಶ್ವಾಸವನ್ನು ಕಳೆದುಕೊಂಡಿದೆ.

ಇದನ್ನೂ ಓದಿ : https://vijayatimes.com/un-report-over-population/

ಈ ಹಿನ್ನೆಲೆಯಲ್ಲಿ ವಾಮಮಾರ್ಗದಿಂದ ಗೆಲ್ಲಲು ಸಂಚು ಹೂಡಿದ್ದಾರೆ. ಇದರಲ್ಲಿ ಮುಖ್ಯಮಂತ್ರಿಗಳು ಮಾತ್ರವಲ್ಲ ಬಿಜೆಪಿ ಪಕ್ಷವೇ ಶಾಮೀಲಾಗಿದೆ. 

ಸದ್ಯಕ್ಕೆ ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆ ಬೆಂಗಳೂರು ಮಹಾನಗರಕ್ಕಷ್ಟೇ ಸೀಮಿತವಾಗಿದ್ದರೂ ಶೀಘ್ರದಲ್ಲಿಯೇ ಇದನ್ನು ಬೇರೆ ಜಿಲ್ಲೆಗಳಿಗೂ ವಿಸ್ತರಿಸುವ ಯೋಚನೆ ಇತ್ತಂತೆ. ಈ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಚಿಲುಮೆ ಸಂಸ್ಥೆಯ ಜೊತೆಗಿನ ಒಪ್ಪಂದವನ್ನು ರದ್ದು ಮಾಡಿಕೊಂಡಿರುವ ಸಂದರ್ಭದಲ್ಲಿ ಇವರೆಗೆ ಅವರು ಸಂಗ್ರಹಿಸಿರುವ ಮಾಹಿತಿಯನ್ನು ಯಾಕೆ ಪಡೆದುಕೊಂಡಿಲ್ಲ?

ಸಂಗ್ರಹಿಸಿದ ಮಾಹಿತಿಯನ್ನು ಬಿಬಿಎಂಪಿಗೆ(BBMP) ನೀಡಿದ್ದಾರೆಯೇ? ಬಿಬಿಎಂಪಿ ಅದನ್ನು ಹೇಗೆ ಬಳಸಿಕೊಂಡಿದೆ?

bjp

ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣ ಬಯಲಾಗಿರುವುದು ಗೊತ್ತಾದ ಕೂಡಲೇ ಬಿಬಿಎಂಪಿಯು ನಿಬಂಧನೆಗಳ ಉಲ್ಲಂಘನೆಯ ಕಾರಣ ನೀಡಿ 16-11-2022 ರಂದು ಖಾಸಗಿ ಸಂಸ್ಥೆಗೆ ನೀಡಿರುವ ಗುತ್ತಿಗೆ ಆದೇಶವನ್ನು ರದ್ದು ಮಾಡಿದ್ದರೂ,

ರದ್ದತಿಗೆ ನಿರ್ದಿಷ್ಟ ಕಾರಣ ನೀಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ. 

ಚಿಲುಮೆ ಕಂಪನಿಯವರು ಬಿಬಿಎಂಪಿ ಮೂಲಕ ತಮ್ಮ ನೌಕರರಿಗೆ ಬೂತ್ ಮಟ್ಟದ ಅಧಿಕಾರಿ ಎಂಬ ಗುರುತಿನ ಚೀಟಿ ನೀಡಿದ್ದೇ ಅಕ್ರಮವಾಗಿದೆ. ಕಾನೂನಿನ ಪ್ರಕಾರ ಸರ್ಕಾರಿ,

ಅರೆ-ಸರ್ಕಾರಿ ಹಾಗೂ ನಿವೃತ್ತ ಸರ್ಕಾರಿ ನೌಕರರಲ್ಲದವರು ಬೂತ್ ಲೆವೆಲ್ ಆಫೀಸರ್ ಆಗಲು ಅವಕಾಶ ಇಲ್ಲ. 

allegation

ಜಾಹಿರಾತು ನೀಡದೆ, ಟೆಂಡರ್ ಕರೆಯದೆ ಬಿಬಿಎಂಪಿ ಒಂದು ಖಾಸಗಿ ಕಂಪನಿಗೆ ಈ ಕಾರ್ಯವನ್ನು ನೀಡಲು ಹೇಗೆ ಸಾಧ್ಯ? ಅನುಮತಿ ನೀಡುವಾಗ ಸಂಸ್ಥೆಯ ಹಿನ್ನೆಲೆಯನ್ನು ಯಾಕೆ ಪರಿಶೀಲಿಸಿಲ್ಲ?

ಉಚಿತ ಸೇವೆ ನೀಡುವ ಉದ್ದೇಶದ ಹಿನ್ನೆಲೆಯನ್ನು ಯಾಕೆ ತಿಳಿದುಕೊಂಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಯಾವುದೋ ಒಂದು ಸಂಸ್ಥೆ ಅರ್ಜಿ ನೀಡಿ ತಾವು ಮತದಾರರನ್ನು ಜಾಗೃತಗೊಳಿಸುವ ಮತ್ತು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಉಚಿತವಾಗಿ ಮಾಡುವುದಾಗಿ ತಿಳಿಸಿದಾಗಲೇ ಸಂಸ್ಥೆಯ ಉದ್ದೇಶದ ಬಗ್ಗೆ ಸಂಶಯ ಮೂಡಬೇಕಿತ್ತು.

ಹೀಗಿದ್ದರೂ 20 ಆಗಸ್ಟ್ 2022ರಂದು ಬಿಬಿಎಂಪಿ ಆಯುಕ್ತರು ಅನುಮತಿ ನೀಡಿದ್ದಾರೆ. 

https://youtu.be/sZSXRbKedtc ಬೆಂಗಳೂರು : ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ರೈಲ್ವೆ ಅಂಡರ್ ಪಾಸ್ನಲ್ಲಿ ಸಮಸ್ಯೆಗಳ ಸುರಿಮಳೆ!

ಚಿಲುಮೆ ಸಂಸ್ಥೆಯ ಮಾಲೀಕ ಕೃಷ್ಣಪ್ಪ ರವಿಕುಮಾರ ಎಂಬವರು ಈ ಹಗರಣದ ರೂವಾರಿಯಾಗಿ ಮೇಲ್ನೋಟಕ್ಕೆ ಕಾಣಿಸಿದರೂ ಇದರ ಹಿಂದೆ ಬಿಜೆಪಿ ಸರ್ಕಾರದ ಉನ್ನತ ಸ್ಥಾನದಲ್ಲಿರುವವರ ಕೈವಾಡ ಖಂಡಿತ ಇದೆ.

ಈ ಬಗ್ಗೆ ತನಿಖೆ ಮಾಡಿದರೆ ಮಾತ್ರ ಸತ್ಯ ಬಯಲಾಗಲು ಸಾಧ್ಯ. 

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ಮಾಹಿತಿ ಸಂಗ್ರಹದ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಾಗಿದ್ದು, ಇದನ್ನು ಖಾಸಗಿ ಸಂಸ್ಥೆಗೆ ಒಪ್ಪಿಸುವುದು ಅಪರಾಧವಾಗಿದೆ.

ಬಿಬಿಎಂಪಿಯ ಅಧಿಕಾರಿಗಳೇ ಎಂದು ತಪ್ಪಾಗಿ ತಿಳಿದು ಮತದಾರರು ವೈಯಕ್ತಿಕ ಮಾಹಿತಿಯನ್ನು ನೀಡಿದ್ದಾರೆ.

bommai

ಇದು ವಿಶ್ವಾಸ ದ್ರೋಹವಾಗಿದೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗದೆ ಇಂತಹದ್ದೊಂದು ಹಗರಣ ನಡೆಸಲು ಸಾಧ್ಯವಿಲ್ಲ, ಅಧಿಕಾರಿಗಳು ಸ್ವಯೀಚ್ಚೆಯಿಂದ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯವಿಲ್ಲ.

ಮುಖ್ಯಮಂತ್ರಿಯವರಿಂದ ಹಿಡಿದು ಬಿಜೆಪಿಯ ಪಕ್ಷದ ಹಿರಿಯ ಸಚಿವರೆಲ್ಲರೂ ಭಾಗಿಯಾಗಿಯೇ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ಬಿಜೆಪಿ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳಿಯವಾಗಿರಲಾರದು.

ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ. 

ಇದನ್ನೂ ಓದಿ : https://vijayatimes.com/we-want-pushpa-2-update/

ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ, ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ.

ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

  • ಮಹೇಶ್.ಪಿ.ಎಚ್
Tags: bjpCongressKarnatakapoliticalpolitics

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.