ಯಡಿಯೂರಪ್ಪ ಕೂಡಲೇ ರಾಜೀನಾಮೆ ನೀಡಲಿ, ಇಲ್ಲ ಈಶ‍್ವರಪ್ಪರಿಂದ ರಾಜೀನಾಮೆ ಪಡೆಯಿರಿ: ಡಿಕೆಶಿ ಆಗ್ರಹ

ಬೆಂಗಳೂರು, ಎ. 01: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅವರ ಸಚಿವ ಸಂಪುಟದ ಸಹದ್ಯೋಗಿ ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ ಹೊರಿಸಿದ್ದು, ಕೂಡಲೇ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದು ಮೊದಲ ಬಾರಿಗೆ  ಕ್ಯಾಬಿನೆಟ್ ಸಚಿವರೊಬ್ಬರು ಮುಖ‍್ಯಮಂತ್ರಿ ವಿರುದ್ಧ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಮೇಲೆ ಸಚಿವರಿಗೆ ವಿಶ‍್ವಾಸ ಇಲ್ಲದಂತಾಗಿದೆ. ವಿಶ್ವಾಸ ಕಳೆದುಕೊಂಡಿರುವ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು.

ಇಲ್ಲವಾದಲ್ಲಿ ಸಂಜೆಯೊಳಗೆ ಸಚಿವ ಈಶ‍್ವರಪ್ಪರಿಂದ ರಾಜೀನಾಮೆ ಪಡೆಯಲಿ. ಈಶ್ವರಪ್ಪ ಅವರು 1,200 ಕೋಟಿ ಹಗರಣದ ಆರೋಪ ಮಾಡಿದ್ದಾರೆ. ತಿಪ್ಪೆ ಸಾರಿಸೋದು ಏನಿಲ್ಲಾ, ಸಿಎಂ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಅಲ್ಲದೇ, ಸಿಡಿ ವಿಚಾರದ ಕುರಿತು ಸಂತ್ರಸ್ತೆಯ ಸಹೋದರನ ಆರೋಪಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದು ನನಗೆ ಸಂಬಂಧ ಪಡದ ವಿಚಾರ. ನನ್ನ ಹೆಸರು ಹೇಳಿದರೆ ಅವರಿಗೆ ಮಾರ್ಕೆಟಿಂಗ್ ಆಗುತ್ತೆ ಅದಕ್ಕೆ ನನ್ನ ಹೆಸರು ಪ್ರಸ್ತಾಪ ಮಾಡುತ್ತಾರೆ ಎಂದರು.

Exit mobile version