ಹೆದ್ದಾರಿಗಳ ಪಕ್ಕದಲ್ಲಿ ಮದ್ಯದಂಗಡಿಗಳನ್ನು ತೆರೆಯುವಂತಿಲ್ಲ; ಆದೇಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ ಜು 26: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಪಕ್ಕದಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ತೆರೆಯಲು ಇನ್ನು ಮುಂದೆ ಲೈಸೆನ್ಸ್​ ನೀಡಬಾರದು ಎಂದು ಸುಪ್ರೀಂಕೋರ್ಟ್​ ನಿರ್ದೇಶನ ನೀಡಿದೆ. ಹೈವೇಗಳಿಂದ 500 ಮೀಟರ್ ಅಂತರದೊಳಗೆ ಯಾವುದೇ ಮದ್ಯದಂಗಡಿಗಳೂ ಇರುವಂತಿಲ್ಲ ಎಂದು ಆದೇಶಿಸಲಾಗಿದೆ. ಹಾಗೇ, ಸ್ಥಳೀಯ ಆಡಳಿತದ ವ್ಯಾಪ್ತಿಯಲ್ಲಿರುವ ಹಾಗೂ 20,000ಕ್ಕಿಂತ ಕಡಿಮೆ ಜನರು ವಾಸ ಮಾಡುವ ಸ್ಥಳಗಳಲ್ಲಿರುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಅಕ್ಕಪಕ್ಕದ 220 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಮದ್ಯವನ್ನು ಮಾರಾಟ ಮಾಡುವಂತಿಲ್ಲ.
ಸುಪ್ರೀಂ ಕೋರ್ಟ್​ನಿಂದ ಈ ಆದೇಶ ಘೋಷಣೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಎಲ್ಲ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಬಗ್ಗೆ ಆದೇಶವನ್ನು ಕಳುಹಿಸಿದೆ. ಮದ್ಯದಂಗಡಿಗಳಿಗೆ ಪರವಾನಗಿ ನೀಡುವಾಗ ಸುಪ್ರೀಂ ಕೋರ್ಟ್​ ನೀಡಿರುವ ನಿರ್ದೇಶನವನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಸೂಚನೆ ನೀಡಿದೆ.

Exit mobile version