2024ರಲ್ಲಿ ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯಲಿರುವ ನೇಮಕಾತಿಗಳ ಲಿಸ್ಟ್ ಇಲ್ಲಿದೆ..!

2024ರಲ್ಲಿ ಕರ್ನಾಟಕ ಸರ್ಕಾರ (List of Recruitments-Kar Govt)ದ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳು ನಡೆಯಲಿವೆ. ಅನೇಕ ನೇಮಕಾತಿಗಳನ್ನು ನಡೆಸಲು ರಾಜ್ಯ ಸರ್ಕಾರ

ಅನುಮತಿ ನೀಡಿದ್ದು, ಹಣಕಾಸು ಇಲಾಖೆಯ ಅನುಮೋದನೆ ಸೇರಿದಂತೆ ಕೆಲ ಹಂತಗಳಲ್ಲಿ ಈ ಪ್ರಕ್ರಿಯೆಗಳು ನಡೆಯುತ್ತಿವೆ. ಹೀಗಾಗಿ 2024ರಲ್ಲಿ ನಿರೀಕ್ಷಿಸಬಹುದಾದ ಅಧಿಸೂಚನೆಗಳು ಯಾವುವು,

ಯಾವ-ಯಾವ ಇಲಾಖೆಗಳಿಂದ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ ಆಗಿವೆ (List of Recruitments-Kar Govt) ಎಂಬುದರ ವಿವರ ಇಲ್ಲಿದೆ.

ಗ್ರಾಮ ಲೆಕ್ಕಿಗರು : ರಾಜ್ಯದಲ್ಲಿ 1500 ಗ್ರಾಮ ಲೆಕ್ಕಿಗರ (Village Accountant) ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ 750 ಹುದ್ದೆಗಳ ನೇಮಕಾತಿಗೆ ಕಂದಾಯ ಇಲಾಖೆ ನಿರ್ಧರಿಸಿದೆ. ಈ ಹಿಂದೆ ಈ

ಹುದ್ದೆಗೆ PUC ಅಂಕಗಳನ್ನು ಪರಿಗಣಿಸಲಾಗುತ್ತಿತ್ತು. ಈ ಬಾರಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

ಸಾರಿಗೆ ಇಲಾಖೆಯ: 2024ರಲ್ಲಿ 9000 ಕಂಡಕ್ಟರ್ ಹಾಗೂ ಕಂಡಕ್ಟರ್ ಕಮ್ ಚಾಲಕ ಹುದ್ದೆಗಳ ನೇಮಕಾತಿಗೆ ಸಾರಿಗೆ ಇಲಾಖೆ ನಿರ್ಧರಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

(Ramalingareddy) ಮಾಹಿತಿ ನೀಡಿದ್ದಾರೆ.

ಕಂದಾಯ ಇಲಾಖೆಯ: ರಾಜ್ಯದಲ್ಲಿರುವ 256 ಉಪನೋಂದಣಿ ಕಚೇರಿಗಳಲ್ಲಿ ಖಾಲಿ ಇರುವ 455 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಆರ್ಥಿಕ ಇಲಾಖೆ ಜೊತೆ ಚರ್ಚಿಸಿ ಹೆಚ್ಚುವರಿ

ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡರು (Krishna Bhairegowda) ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ : ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (Gram Panchayat Development Officer)150, ಪಂಚಾಯಿತಿ

ಕಾರ್ಯದರ್ಶಿ 135, ಪಂಚಾಯ್ತಿ ಕಾರ್ಯದರ್ಶಿ 343, ದ್ವಿತೀಯ ದರ್ಜೆ ಲೆಕ್ಕ ಸಹಾಯಕ –105 ಹುದ್ದೆಗಳಿಗೆ ನೇಮಕಾತಿಗೆ ನಿರ್ಧರಿಸಲಾಗಿದೆ.

ಪೊಲೀಸ್ ಇಲಾಖೆ : 20,000 ಪೊಲೀಸರ ಅಗತ್ಯವಿದ್ದು, ಇದರಲ್ಲಿ ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : 2439 ನಿಲಯ ಪಾಲಕರು / ನಿಲಯ ಮೇಲ್ವಿಚಾರಕರ ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 1006 ಹುದ್ದೆಗಳನ್ನು ನೇರ ನೇಮಕಾತಿ ಕೋಟಾದಡಿ ಭರ್ತಿ

ಮಾಡುವುದಕ್ಕಾಗಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕೆಎಎಸ್ : 656 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಆದರೆ ಆರ್ಥಿಕ ಇಲಾಖೆ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದೆ.

ಅರಣ್ಯ ಇಲಾಖೆ : 26 ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ಇದು ಪರಿಶೀಲನೆಯಲ್ಲಿರುತ್ತದೆ.

ಇದನ್ನು ಓದಿ: ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿವೆ: ಸಿಎಂ ಸಿದ್ದರಾಮಯ್ಯ ಪ್ರತ್ಯಾರೋಪ

Exit mobile version