Visit Channel

ಸಾಹಿತಿ ಹಾಗೂ ಹಿರಿಯ ಸಂಶೋಧಕ ಹ.ಕ. ರಾಜೇಗೌಡ ವಿಧಿವಶ

a2b19f37-7a8a-471c-b962-a54b817d41ba

ಮೈಸೂರು,ಜೂ.17: ಮೈಸೂರಿನ ಮಾನಸಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕ ಹ.ಕ.ರಾಜೇಗೌಡ ಅವರು ಗುರುವಾರ ಸಂಜೆ ವಿಧಿವಶರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಿರಿಯ ಸಂಶೋಧಕರಾಗಿ ಮಾತ್ರವಲ್ಲದೆ, ಎನ್ ಜಿಇಎಫ್ ವಿಶೇಷ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಗ್ರಂಥ ಸಂಪಾದನೆ, ಅನುವಾದ, ಇತಿಹಾಸ, ಜೀವನ ಚರಿತ್ರೆ, ನಾಟಕ, ಸಂಶೋಧನೆ, ವಿಮರ್ಶೆ, ಸಂಕಲನಗಳು, ಅಭಿನಂದನಾ ಗ್ರಂಥಗಳು ಸೇರಿದಂತೆ ಸುಮಾರು 62 ಕೃತಿಗಳನ್ನು ಸಂಪಾದಿಸಿದ್ದಾರೆ.

ಜಿಶಂಪ ಜಾನಪದ ಪ್ರಶಸ್ತಿ, ಚುಂಚಶ್ರೀ ಪ್ರಶಸ್ತಿ, ಎಂ.ಎಲ್. ಶ್ರೀಕಂಠೇಗೌಡ ಸಂಶೋಧನಾ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಎಚ್.ಡಿ.ಚೌಡಯ್ಯ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಮೂಲತಃ ಕೆ.ಆರ್.ಪೇಟೆ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದವರಾದ ರಾಜೇಗೌಡರು, ಮೈಸೂರಿನ ಸರಸ್ವತಿಪುರಂ ಬಡಾವಣೆಯಲ್ಲಿರುವ ಮಗಳು ಚೇತನಾ ಬಾಲಕೃಷ್ಣ ಅವರೊಂದಿಗೆ ಇದ್ದರು. ಇವರು ಪುತ್ರ ದಿನೇಶ್ ಚಂದ್ರ ಹಾಗೂ ಅಳಿಯ ಐಪಿಎಸ್ ಅಧಿಕಾರಿ ಕೆ.ಟಿ.ಬಾಲಕೃಷ್ಣ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯು ಸ್ವಗ್ರಾಮ ಹನುಮನಹಳ್ಳಿಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.