ಜೀವ ಭಯದಲ್ಲಿ ಬದುಕುತ್ತಿರುವೆ; ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುವೆ: ಸಿಡಿ ಲೇಡಿ ಘರ್ಜನೆ

ಬೆಂಗಳೂರು, ಮಾ. 26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿರುವ ಯುವತಿ ಶುಕ್ರವಾರ 3ನೇ ವಿಡಿಯೋ ಬಿಡುಗಡೆ ಮಾಡಿದ್ದು, ತಮ್ಮ ವಕೀಲ ಜಗದೀಶ್ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿದ್ದಾಳೆ.

ನಿನ್ನೆಯಷ್ಟೇ ಎರಡನೇ ವಿಡಿಯೋ ಬಿಡುಗಡೆ ಮಾಡುವ ಮೂಲಕ ತಮ್ಮ ತಂದೆ-ತಾಯಿ ರಕ್ಷಣೆ ಬಗ್ಗೆ ಹಾಗೂ ಎಸ್ಐಟಿ ಅಧಿಕಾರಿಗಳ ಬಗ್ಗೆ ಭಾರೀ ಆರೋಪ ಮಾಡಿದ್ದರು. ಸಿಡಿ ಲೇಡಿಯ ಈ ವಿಡಿಯೋ ಹೊಸ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಮೂರನೇ ವಿಡಿಯೋ ಬಿಡುಗಡೆ ಮಾಡಿರುವ ಯುವತಿ, ಎಲ್ಲಾ ಕರ್ನಾಟಕದ ಜನತೆಯ ತಂದೆ-ತಾಯಿ ಆಶೀರ್ವಾದದಿಂದ, ಎಲ್ಲಾ ಪಕ್ಷದ ನಾಯಕರು ಹಾಗೂ ಸಂಘಟನೆಯವರು ನನ್ನ ಬೆಂಬಲಿಸುತ್ತಿದ್ದೀರಾ. ನಾನು 24 ದಿನ ಜೀವ ಭಯದಲ್ಲಿ ಬದುಕುತ್ತಿದ್ದೇನೆ. ಈಗ ನನ್ನ ಎಲ್ಲಾ ಬೆಂಬಲಿಸುತ್ತಿದ್ದೀರಾ ಎಂಬ ಭರವಸೆಯಿಂದ ರಮೇಶ್ ಜಾರಕಿಹೊಳಿ ವಿರುದ್ಧ ನನ್ನ ವಕೀಲ ಜಗದೀಶ್ ವಿರುದ್ಧ ದೂರು ಸಲ್ಲಿಸುತ್ತಿದ್ದೇನೆ” ಎಂದು ಯುವತಿ ಹೇಳಿದ್ದಾಳೆ.

29 ಸೆಕೆಂಡ್ ಅವಧಿಯ ಈ ವಿಡಿಯೋದಲ್ಲಿ ಯುವತಿ ಇಷ್ಟು ವಿವರ ಮಾತ್ರ ಹೇಳಿದ್ದಾಳೆ. ರಮೇಶ್ ಜಾರಕಿಹೊಳಿ ವಿರುದ್ಧ ನಾನೇ ಸ್ವತಃ ದೂರು ಸಲ್ಲಿಸುತ್ತಿದ್ದೇನೆ ಎಂಬುವುದಕ್ಕೆ ಪೊಲೀಸರಿಗೆ ದೂರು ಬರೆಯುತ್ತಿರುವ ಫೋಟೊವನ್ನು ಯುವತಿ ಕಳುಹಿಸಿದ್ದಾಳೆ.
ರಮೇಶ್ ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿರುವ ಕಾರಣ ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ.

Latest News

ರಾಜಕೀಯ

“ಕಾಂಗ್ರೆಸ್ ಬಸ್‍ಗೆ ಎರಡು ಸ್ಟೇರಿಂಗ್” : ಸಚಿವ ಡಾ. ಸುಧಾಕರ್

“ಪ್ರಸ್ತುತ ಕಾಂಗ್ರೆಸ್ ಪಕ್ಷ ಈಗ ಡಂಬಲ್ ಡೋರ್ ಬಸ್‍ನಲ್ಲಿ ಪ್ರಯಾಣಿಸುತ್ತಿದೆ. ಈ ಬಸ್‍ನಲ್ಲಿರುವ ಅವರ ಪಕ್ಷದವರ ಪೈಕಿ ಯಾರನ್ನು ಪ್ರಥಮವಾಗಿ ಕೆಳಗಿಳಿಸುತ್ತಾರೋ ತಿಳಿಯದು.

ದೇಶ-ವಿದೇಶ

ಮನೆ ಮತ್ತು ಕಾರ್ಪೊರೇಟ್ ಕಚೇರಿಗಳ ಮೇಲೆ ಶೇ.18 ರಷ್ಟು ಜಿಎಸ್‌ಟಿ ? ; ಏನಿದು ಗೊಂದಲ ಇಲ್ಲಿದೆ ಮಾಹಿತಿ

ಹೊಸ ನಿಯಮಗಳ ಪ್ರಕಾರ, ಜಿಎಸ್‌ಟಿ ನೋಂದಾಯಿತ ಹಿಡುವಳಿದಾರನು ರಿವರ್ಸ್ ಚಾರ್ಜ್ ಮೆಕ್ಯಾನಿಸಂ (RCM) ಅಡಿಯಲ್ಲಿ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುತ್ತಾನೆ.

ಪ್ರಮುಖ ಸುದ್ದಿ

ತಾಜುದ್ದೀನ್ಜುನೈದೀ ಮತ್ತು  ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಗಣ್ಯರ ಸಂತಾಪ

ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿ ಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ.