ಎಲ್‌ಕೆಜಿ ಯುಕೆಜಿ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು ನ 8 : ಕರೋನಾ ಭೀತಿಯ ನಡುವೆಯೂ ರಾಜ್ಯಾದ್ಯಂತ 1 ರಿಂದ 12 ನೇ ತರಗತಿಗಳನ್ನು ಆರಂಭಿಸಲಾಗಿದೆ.

ಇದೀಗ ರಾಜ್ಯಾದ್ಯಂತ ಇಂದಿನಿಂದ ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅರ್ಧ ದಿನ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವು ದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು.

ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಾಲೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಅನ್ವಯಿ ಸುವಂತೆ, ಈ ಕೆಳಕಂಡ ಕ್ರಮವಹಿಸಲು ಸೂಚಿಸಿದೆ.

Exit mobile version