ಇತ್ತೀಚೆಗೆ ನಡೆದ ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಚುನಾವಣೆಗಳು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಎಲ್ಲೋ ಒಂದು ಕಡೆ ಕೆಲವರು ಇದು ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಅಂದಕೊಂಡರೆ ಇನ್ನು ಕೆಲವರು ಇದು ಕೇವಲ ಸ್ಥಳಿಯ ಸಂಸ್ಥೆಗಷ್ಟೆ ಸೀಮಿತ. ಇದು ವಿಧಾನ ಸಭೆ ಚುನಾವಣೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುವುದು ಇನ್ನು ಕೆಲವರ ಅಭಿಪ್ರಾಯವಾಗಿದೆ.
ಇತ್ತೀಚೆಗೆ ರಾಜ್ಯದಲ್ಲಿ ಕೆಲ ಉಪ ಚುನಾವಣೆಗಳು ಸೇರಿದಂತೆ ಹಲವು ಚುನಾವಣೆಗಳು ನಡೆದಿದ್ದು ಕೆಲವು ಚುನಾವಣೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದರೆ ಇನ್ನು ಕೆಲವು ಫಲಿತಾಂಶ ಕಾಂಗ್ರೆಸ್‌ಗೆ ಬಲ ತಂದುಕೊಟ್ಟಿರುವುದಂತೂ ನಿಜ. ಆದರೆ ಇತ್ತೀಚಿನ ದಿನಗಳಲ್ಲಿ ಜೆಡಿಎಸ್‌ನ ಕಾರ್ಯವೈಕರಿಗಳು ನಡೆಯದ ಕಾರಣವೋ, ಅಥವಾ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರ ಹೇಳಿಕೆ ಗಳಿಂದಲೋ ಜೆಡಿಎಸ್ ಪ್ರತಿ ಚುನಾವಣೆಗಳಲ್ಲೂ ಮೂರು ಅಥವಾ ನಾಲ್ಕನೇ ಸ್ಥಾನಕ್ಕೆ ಕುಸಿತ ಕಾಣುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.