ಬೆಂಗಳೂರು, ಮೇ. 11: ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರವು ಲಾಕ್ಡೌನ್ ಘೋಷಣೆ ಮಾಡಿದೆ, ಈ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಚಿತ್ರರಂಗದ ಕಾರ್ಮಿಕರಿಗೆ ನಟ ಉಪೇಂದ್ರ ನೆರವಾಗಿದ್ದಾರೆ.
ರಿಯಲ್ ಸ್ಟಾರ್ ಉಪೇಂದ್ರ ಅವರು 3 ಸಾವಿರ ಸಿನಿಮಾ ಕಾರ್ಮಿಕರ ಕುಟುಂಬಕ್ಕೆ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದು, ಇದನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಘೋಷಿಸಿದ್ದಾರೆ.
ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ತರನ್ನು ಸಂಪರ್ಕಿಸಿ ಎಂದು ಉಪೇಂದ್ರ ಅವರು ಪೋಸ್ಟ್ ಮಾಡಿದ್ದಾರೆ.