• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

Lockdown Karnataka; ಮತ್ತೆ 14 ದಿನ ಲಾಕ್‌ಡೌನ್‌ ವಿಸ್ತರಣೆ; ಜೂನ್‌ 7ರವರೆಗ ಟಫ್‌ ರೂಲ್ಸ್‌ ಜಾರಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
Lockdown Karnataka; ಮತ್ತೆ 14 ದಿನ ಲಾಕ್‌ಡೌನ್‌ ವಿಸ್ತರಣೆ; ಜೂನ್‌ 7ರವರೆಗ ಟಫ್‌ ರೂಲ್ಸ್‌ ಜಾರಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 22: ರಾಜ್ಯದಲ್ಲಿ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​​ನ ವಿಸ್ತರಿಸಿದೆ. ಮೇ 24ರವರೆಗೆ ಲಾಕ್​ಡೌನ್​ ಘೋಷಿಸಿದ್ದ ಸಿಎಂ ಬಿ.ಎಸ್​.ಯಡಿಯೂರಪ್ಪ ಈಗ ಲಾಕ್​​ಡೌನ್​​ನ ಜೂ.7ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಸಚಿವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಎದುರು ಮತ್ತೆ 14 ದಿನಗಳ ಕಾಲ ರಾಜ್ಯಾದ್ಯಂತ ಟಫ್​ ಲಾಕ್​ಡೌನ್​ ಮುಂದುವರೆಯಲಿದೆ ಎಂದು ಘೋಷಿಸಿದರು.

ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಲಾಕ್‌ಡೌನ್ ವಿಚಾರದಲ್ಲಿ ಕೆಲ ನಿರ್ಧಾರ ಮಾಡಿದ್ದೇವೆ. ರಾಜ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದೇವೆ. ಕೋವಿಡ್ ಹಳ್ಳಿಗಳಿಗೆ ಹೆಚ್ಚಾಗಿ ಹರಡಿದೆ. ಹೀಗಾಗಿ ಕೋವಿಡ್ ನಿಯಂತ್ರಣಕ್ಕೆ ಲಾಕ್​ಡೌನ್​ ಮುಂದುವರಿಕೆ ತೀರ್ಮಾನ ಮಾಡಲಾಗಿದೆ. ಕಠಿಣ ನಿರ್ಬಂಧ ಹೇರಿಕೆ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಜನರು ಈ ಕಠಿಣ ನಿರ್ಬಂಧಗಳನ್ನು ಪಾಲಿಸಬೇಕು.

ಇನ್ನು ಜನರು ಭಯಗೊಂಡಿರುವ ಬ್ಲ್ಯಾಕ್​​ ಫಂಗಸ್ ರೋಗಕ್ಕೆ ‌ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುತ್ತೇವೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಿದ್ದೇವೆ ಎಂದು ಸಿಎಂ ಘೋಷಿಸಿದರು. ಹಿಂದಿನ ಮಾರ್ಗಸೂಚಿ ನಿಯಮಗಳೇ ಮುಂದುವರಿಯಲಿವೆ ಎಂದು ಬಿಎಸ್​ವೈ ತಿಳಿಸಿದರು. ಬೆಳಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರಬರದೇ ಲಾಕ್​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಮನವಿ ಮಾಡಿಕೊಂಡರು.

ಬೆಳಗ್ಗೆ 10 ಗಂಟೆಯ ನಂತರವೂ ಜನ ಅನಗತ್ಯವಾಗಿ ಓಡಾಡುತ್ತಿರುವುದು ಕಂಡು ಬರುತ್ತಿದೆ. ಜನ ಲಾಕ್​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಈಗ ಜಾರಿಯಲ್ಲಿರುವ ನಿಯಮವಾದ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮುಂದುವರೆಯಲಿದೆ. ಈಗ ಜಾರಿಯಲ್ಲಿರುವ ಎಲ್ಲಾ ಲಾಕ್​ಡೌನ್​ ನಿಯಮಗಳೂ ಜೂನ್​ 7ರವರೆಗೆ ಮುಂದುವರೆಯಲಿದೆ.  ಅನುಮತಿ ನೀಡಿರುವ ಕ್ಷೇತ್ರಗಳ ನೌಕರರು, ವ್ಯಾಕ್ಸಿನ್​​ ಪಡೆಯುವವರು, ತುರ್ತು  ಕಾರಣಗಳಿರುವವರು ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ.

ಜೂನ್​​ 7ರವರೆಗೆ ಬಸ್​​ ಸಂಚಾರ, ಮೆಟ್ರೋ ಸಂಚಾರ ಸಂಪೂರ್ಣ ಬಂದ್​​​ ಇರಲಿದೆ. ಮಾಲ್​​, ಚಿತ್ರಮಂದಿರಗಳು, ಪಾರ್ಕ್​ಗಳು, ಈಜುಕೊಳಗಳನ್ರನು ತೆರೆಯುವಂತಿಲ್ಲ. ಧಾರ್ಮಿಕ ಕಾರ್ಯಗಳಾದ ಜಾತ್ರೆ, ಮಹೋತ್ಸವಗಳು, ದೇವರ ಉತ್ಸವಗಳು, ದೇವಸ್ಥಾನಗಳು, ಧಾರ್ಮಿಕ ಸ್ಥಳಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ.ಇನ್ನು ರಾಜ್ಯದಲ್ಲಿಂದೂ ಕೊರೋನಾ ಆರ್ಭಟ ಮುಂದುವರೆದಿದ್ದು, 24 ಗಂಟೆಗಳ ಅವಧಿಯಲ್ಲಿ 32,218 ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ ರಾಜ್ಯಾದ್ಯಂತ ಬರೋಬ್ಬರಿ 353 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇನ್ನು ಇಂದು 52,581 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 9,591 ಮಂದಿ ಕೋವಿಡ್​ ರಿಪೋರ್ಟ್​ ಪಾಸಿಟಿವ್​ ಬಂದಿದೆ. 26,956 ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜನ ಜವಾಬ್ದಾರಿ ಮರೆಯದೇ ಮಾಸ್ಕ್​​​ನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಿದೆ. ಕೊರೋನಾ ವ್ಯಾಕ್ಸಿನ್​ ಪಡೆಯುವ ಮೂಲಕ ಕೊರೋನಾ ವಿರುದ್ಧದ ಯುದ್ಧದಲ್ಲಿ ಎಲ್ಲರೂ  ಕೈಜೋಡಿಸಬೇಕಿದೆ.

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.