ದೆಹಲಿಯಲ್ಲಿ ಇಂದಿನಿಂದ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ

ದೆಹಲಿ, ಏ. 19: ದೆಹಲಿಯಲ್ಲಿ ಕೊರೊನಾವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರೋಗ ನಿಯಂತ್ರಣಕ್ಕಾಗಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ 6 ದಿನಗಳ ಲಾಕ್​ಡೌನ್ ಘೋಷಿಸಿರುವ ಸರ್ಕಾರ ಇಂದು ರಾತ್ರಿಯಿಂದಲೇ ಈ ನಿಯಮ ಜಾರಿಗೆ ಬರಲಿದೆ ಎಂದಿದೆ. ಇಂದು (ಸೋಮವಾರ) ರಾತ್ರಿ 10ಗಂಟೆಯಿಂದ ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಲಾಕ್ ಡೌನ್ ಇರಲಿದೆ ಎಂದಿದ್ದಾರೆ. ಎಲ್ಲ ಖಾಸಗಿ ಕಚೇರಿಗಳು ವರ್ಕ್ ಫ್ರಂ ಹೋಮ್ ವ್ಯವಸ್ಥೆಯಿಂದ ಕಾರ್ಯವೆಸಗಲಿದ್ದು, ಸರ್ಕಾರಿ ಆಸ್ಪತ್ರೆ ಮತ್ತು ಅಗತ್ಯ ಸೇವೆಗಳು ಲಭ್ಯವಿರಲಿದೆ ಎಂದು ಮೂಲಗಳು ಹೇಳಿವೆ.

ಭಾನುವಾರ ದೆಹಲಿಯಲ್ಲಿ 25,462 ಹೊಸ ಪ್ರಕರಣಗಳು ವರದಿ ಆಗಿದ್ದು, ಇಲ್ಲಿ ಪಾಸಿಟಿವಿಟಿ ದರ ಶೇ 30 ರಷ್ಟಿದೆ. ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ರಾಜಧಾನಿಯಲ್ಲಿ ‘ಬ್ರೇಕ್ ದಿ ಚೈನ್ ಅಭಿಯಾನ’ ನಡೆಸಿ ವಾರಾಂತ್ಯ ಕರ್ಫ್ಯೂ ಘೋಷಿಸಿದ್ದರೂ ಜನರು ನಿಯಮಗಳ ಉಲ್ಲಂಘನೆ ಮಾಡುತ್ತಲೇ ಇದ್ದಾರೆ. ಹೀಗಾಗಿ ಕಠಿಣ ನಿಯಮಗಳನ್ನು ಜಾರಿಗೆ ತರುವುದು ಅನಿವಾರ್ಯವಾಗಿತ್ತು.
ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿ ಮಾಡಿದ ನಂತರ ಈ ನಿರ್ಧಾರ ಘೋಷಿಸಿದ್ದಾರೆ.

Exit mobile version