ಕೊಲ್ಕತ್ತಾ, ಅ 28 : ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಪಶ್ಷಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾಪುರ ಪುರಸಭೆ ಪ್ರದೇಶದಲ್ಲಿ ಮೂರು ದಿನಗಳ ಲಾಕ್‍ಡೌನ್ ವಿಧಿಸಲಾಗಿದೆ. ಸೋನಾಪುರ್‍ನಿಂದ ಪಶ್ಚಿಮ ಬಂಗಾಳ ರಾಜಧಾನಿ ಕೊಲ್ಕತ್ತಾಗೆ ಕೇವಲ 20 ಕಿ.ಮೀ. ಅಂತರವಿದೆ. ಸೋಂಕು ವೇಗವಾಗಿ ಹರಡುವ ಭೀತಿಯಿಂದ ಲಾಕ್‍ಡೌನ್ ಕ್ರಮಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಲಾಕ್‍ಡೌನ್ ಅವಧಿಯಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ಇರುತ್ತದೆ. ಸೋನಾಪುರ್ ಪ್ರದೇಶದಲ್ಲಿ ಒಟ್ಟು 19 ಕಂಟೇನ್‍ಮೆಂಟ್ ಜೋನ್‍ಗಳಿವೆ.
“ಕೋವಿಡ್-19 ಲಸಿಕೆಯ ಎರಡೂ ಡೋಸ್ ಪಡೆದ ಹೆಚ್ಚಿನವರಲ್ಲೇ ಕೊರೊನಾ ಸೋಂಕು ದೃಢಪಟ್ಟಿದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.