ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಅನಿವಾರ್ಯ – ಸಿಎಂ

ಬೆಳಗಾವಿ 03 : ಸಾರ್ವಜನಿಕರು ಸರಿಯಾದ ಕೋವಿಡ್‌ ನಿಯಮಗಳನ್ನು ಸರಿಯಾಗಿ ಪಾಲಿಸದಿದ್ದರೆ ಲಾಕ್‌ಡೌನ್‌ ಮಾಡಬೇಕಾದ ಪರಿಸ್ಥಿತಿ ಅನಿವಾರ್ಯ ಎಂದು ಸಿಎಂ ತಿಳಿಸಿದ್ದಾರೆ. ಕೋವಿಡ್ ರೂಪಾಂತರಿ ಒಮೈಕ್ರಾನ್ ಸೋಂಕು ತಡೆಗಟ್ಟಲು ಮುಂಬೈ ಮಾದರಿಯಲ್ಲಿ ಬೆಂಗಳೂರು ನಗರದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸುವ ಸಂಬಂಧ ಎರಡು ದಿನಗಳಲ್ಲಿ ತಜ್ಞರ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕರ್ಪೂ ವಿಸ್ತರಣೆ ಬಗ್ಗೆ ಜ.3 ಅಥವಾ 4ರಂದು ಸಭೆ ನಡೆಸಿ ತೀರ್ಮಾನ ಮಾಡಲಾಗುವುದು. ಕೋವಿಡ್ ಸೋಂಕು ಯಾವ ರೀತಿಯಲ್ಲಿ ಹರಡುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇವೆ. ವಿಶೇಷವಾಗಿ ಬೆಂಗಳೂರು ಸೂಕ್ಷ್ಮವಾಗಿ ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹಬ್ಬುತ್ತಿದೆ. ಇವೆಲ್ಲವನ್ನೂ ಗಮನಿಸಿ ತೀರ್ಮಾನ ಮಾಡುತ್ತೇವೆ ಎಂದರು.

ಜೊತಗೆಒಂದು ವಾರದಿಂದ ದೇಶದಲ್ಲಿ ಕೊರೋನ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಅದರಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿರುವುದನ್ನು ಗಮನಿಸುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಬರುತ್ತಿವೆ. ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಹಾಗೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕರ್ನಾಟಕ ರಾಜ್ಯಕ್ಕೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಬೆಳಗಾವಿ ಜೊತೆ ಅಕ್ಕ-ಪಕ್ಕದ ಚೆಕ್ ಪೋಸ್ಟ್ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ವಿಜಯಪುರ ಜಿಲ್ಲೆ ಸೇರಿ ಇನ್ನಿತರ ಗಡಿ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್ ಮಾಡಿದ್ದಾರೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿಯೂ ಆಗಬೇಕು ಎಂದು ಅವರು ಸೂಚನೆ ನೀಡಿದರು.

ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ 11 ಚೆಕ್‌ಪೋಸ್ಟ್ ಗಳನ್ನು ಮಾಡಲಾಗಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಕೆಲ ಪ್ರಯಾಣಿಕರಿಗೆ ತೊಂದರೆ ಆಗಬಹುದು. ಆದರೆ, ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ. ಇದು ಕೇವಲ ನಿರ್ಬಂಧ ಅಷ್ಟೇ ಅಲ್ಲ, ನಾವು ಪೂರ್ವ ತಯಾರಿ ಮಾಡಬೇಕಿದೆ ಎಂದರು. 

Exit mobile version