ಲೋಕಸಮರ 2024 : ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Bengaluru: ದೇಶಾದ್ಯಂತ ಲೋಕಸಭಾ ಚುನಾವಣೆಯ (Lok Sabha Election Karnataka) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ

ಅಧಿಕೃತ ಪ್ರಕ್ರಿಯೆ ಇಂದಿನಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಇನ್ನು ಏಪ್ರಿಲ್ 4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, ಏಪ್ರಿಲ್ 5ರಂದು ಎಲ್ಲಾ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8ರಂದು ನಾಮಪತ್ರ ಮರಳಿ ಪಡೆಯಲು ಕೊನೆಯ

ದಿನವಾಗಿದೆ. ಏಪ್ರಿಲ್ 26ರಂದು ರಾಜ್ಯದ 14 ಕ್ಷೇತ್ರಗಳಿಗೆ ಮತದಾನ (Lok Sabha Election Karnataka) ನಡೆಯಲಿದೆ. ಜೂನ್ 4ರಂದು ಎಲ್ಲಾ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದೆ

ಇಂದು ನಾಮಪತ್ರ ಸಲ್ಲಿಕೆಯಾಗುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕೂಟ (BJP-JDS alliance) ತಮ್ಮ ಅಭ್ಯರ್ಥಿಗಳನ್ನು ಈಗಾಗಲೇ ಘೋಷಣೆ ಮಾಡಿವೆ.

ಬಿಜೆಪಿ ತನ್ನ 11 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಜೆಡಿಎಸ್ ತನ್ನ ಪಾಲಿನ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಕಾಂಗ್ರೆಸ್ ಅಭ್ಯರ್ಥಿಯನ್ನು

ಘೋಷಣೆ ಮಾಡಿದ, ನಂತರ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡುವ ತಂತ್ರ ರೂಪಿಸಿದೆ. ಈ ಮಧ್ಯೆ ಚಿಕ್ಕಬಳ್ಳಾಪುರ, ಕೋಲಾರ ಹೊರತುಪಡಿಸಿ ಉಳಿದ 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು

ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿದೆ.

ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳು :

ಉಡುಪಿ – ಚಿಕ್ಕಮಗಳೂರು

ಹಾಸನ

ದಕ್ಷಿಣ ಕನ್ನಡ

ಚಿತ್ರದುರ್ಗ (ಎಸ್ಸಿ)

ತುಮಕೂರು

ಮಂಡ್ಯ

ಮೈಸೂರು

ಚಾಮರಾಜನಗರ (ಎಸ್ಸಿ)

ಬೆಂಗಳೂರು ಗ್ರಾಮಾಂತರ

ಬೆಂಗಳೂರು ಉತ್ತರ

ಬೆಂಗಳೂರು ಕೇಂದ್ರ

ಬೆಂಗಳೂರು ದಕ್ಷಿಣ

ಚಿಕ್ಕಬಳ್ಳಾಪುರ

ಕೋಲಾರ (ಎಸ್ಸಿ)

ಇದನ್ನು ಓದಿ: ಸೌಥ್ ಈಸ್ಟರ್ನ್ ಕೋಲ್ ಫೀಲ್ಡ್ನಲ್ಲಿ ವಿವಿಧ ಹು ದ್ದೆಗಳಿಗೆ ಅರ್ಜಿ ಆಹ್ವಾನ

Exit mobile version