New Delhi: ಇಂದು ಬೆಳಿಗ್ಗೆ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಈ ವೇಳೆ ಹೊಸ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ನಡೆಯಲಿದ್ದು, ಜೂನ್ (June) 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ನಡೆಯಲಿದೆ ಹಾಗೂ ಜೂ.27ರಂದು ಅಧ್ಯಕ್ಷೆ ದ್ರೌಪದಿ ಮುರ್ಮು (Draupadi Murmu) ಉಭಯ ಸದನಗಳ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಏಳು ಬಾರಿ ಸಂಸದರಾಗಿರುವ ಬಿಜೆಪಿಯ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ ವಿರೋಧ-ಗದ್ದಲದ ನಡುವೆ, 18ನೇ ಲೋಕಸಭೆಯ ಚೊಚ್ಚಲ ಅಧಿವೇಶನ ಆರಂಭವಾಗಲಿದೆ.

ಜೂನ್ 28 ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯು ಸದನದಲ್ಲಿ ಭಾರೀ ಗದ್ದಲ-ಕೋಲಾಹಲಕ್ಕೆ ಕಾರಣವಾಗಬಹುದು. NEET-UG ಮತ್ತು UGC-NET ಪರೀಕ್ಷೆಗಳು, ಹೊಸ ಕ್ರಿಮಿನಲ್ ಕಾನೂನುಗಳು ಮತ್ತು ಕಾಂಚನಜುಂಗಾ ಎಕ್ಸ್‌ಪ್ರೆಸ್ ಅಪಘಾತ (Kanchanjunga Express Accident) ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಮುಂದಾಗಿವೆ. ಸಿದ್ಧತೆ ಮಾಡಿಕೊಂಡಿವೆ. ಜುಲೈ 2 ಅಥವಾ 3 ರಂದು ಪ್ರಧಾನ ಮಂತ್ರಿಗಳು ಸದನದಲ್ಲಿ ಚರ್ಚೆಗೆ ಪ್ರತಿಕ್ರಿಯಿಸುವ ಸಾಧ್ಯತೆಯಿದೆ. ನಂತರ ಸಂಸತ್ ಕಲಾಪ ಅಲ್ಪ ವಿರಾಮ ಪಡೆದು ಜುಲೈ 22ರಂದು ಬಜೆಟ್ ಮಂಡನೆ ವೇಳೆ ಮತ್ತೆ ಸೇರಲಿದೆ.
ನಂತರ ತಮ್ಮ ಅನುಪಸ್ಥಿತಿಯಲ್ಲಿ ಹಂಗಾಮಿ ಸ್ಪೀಕರ್ ಆಗಿ ಕೆಲಸ ಮಾಡುವ ಐವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಕೋಡಿಕುನ್ನಿಲ್ ಸುರೇಶ್ (ಕಾಂಗ್ರೆಸ್), ಟಿ.ಆರ್.ಬಾಲು (ಡಿಎಂಕೆ), ರಾಧಾ ಮೋಹನ್ ಸಿಂಗ್ (Radha Mohan Sing) ಮತ್ತು ಫಗ್ಗನ್ ಸಿಂಗ್ ಕುಲಸ್ತೆ (ಇಬ್ಬರೂ ಬಿಜೆಪಿ) ಮತ್ತು ಸುದೀಪ್ ಬಂಡೋಪಾಧ್ಯಾಯ (ಟಿಎಂಸಿ)- ಇವರು ಸ್ಪೀಕರ್ ಸಮಿತಿಯಲ್ಲಿರುವ ಸದಸ್ಯರುಗಳು.ಬಳಿಕ ಹಂಗಾಮಿ ಸ್ಪೀಕರ್ ಅವರು ಮೋದಿ ಸರ್ಕಾರದ ಮಂತ್ರಿ ಪರಿಷತ್ತಿಗೆ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಬೋಧಿಸುತ್ತಾರೆ. ಲೋಕಸಭೆಯ ಸ್ಪೀಕರ್ ಹುದ್ದೆಗೆ ಬುಧವಾರ ಚುನಾವಣೆ ನಡೆಯಲಿದೆ. ಬಳಿಕ ಮೋದಿ (Modi) ಅವರು ತಮ್ಮ ಸಚಿವ ಸಂಪುಟವನ್ನು ಸದನಕ್ಕೆ ಪರಿಚಯಿಸಲಿದ್ದಾರೆ.