ಅಕ್ರಮ ಆಸ್ತಿಗಳಿಕೆ ಪ್ರಕರಣ ಲೋಕಾಯುಕ್ತರಿಂದ ಡಿ.ಕೆ ಶಿವಕುಮಾರ್​ಗೆ ನೋಟಿಸ್

Bengaluru: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮತ್ತೂಮ್ಮೆ ಸಂಕಷ್ಟ ಎದುರಾಗಿದೆ. ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್​ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. 2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar)​ ಅವರ ಮೇಲಿದೆ.

ಈ ಕುರಿತಾಗಿ ಈಗಾಗಲೇ ಲೋಕಾಯುಕ್ತ (Lokayukta) ದೂರು ದಾಖಲಿಸಿಕೊಂಡಿದ್ದು, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ದಾಖಲೆಗಳನ್ನು ನೀಡುವಂತೆಯೂ ಹಣದ ಮೂಲಗಳ ಕುರಿತು ದಾಖಲೆಗಳನ್ನು ನೀಡುವಂತೆ ಆದೇಶ ಹೊರಡಿಸಿದೆ.ಇದರಿಂದಾಗಿ ಲೋಕಸಭಾ ಚುನಾವಣೆ (Loksabha Election) ಪ್ರಚಾರದಲ್ಲಿ ಬ್ಯುಸಿಯಾಗಿರುವ ಡಿಕೆ ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.

ಆಸ್ತಿ ಗಳಿಕೆ ಆರೋಪದಡಿ ಡಿಕೆ ಶಿವಕುಮಾರ್ ವಿರುದ್ಧ 2020ರ ಅಕ್ಟೋಬರ್ ಅಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ಪ್ರಕರಣ ದಾಖಲಿಸಿತ್ತು. ಆದ್ರೆ, ಈ ಹಿಂದೆ ಬಿಜೆಪಿ ಸರ್ಕಾರ ಸಿಬಿಐ (CBI) ತನಿಖೆಗೆ ನೀಡಿದ್ದ ಅನುಮತಿಯನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಅಲ್ಲದೇ ಈ ಪ್ರಕರಣದ ತನಿಖೆಯನ್ನು ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ, 2023ರ ನವೆಂಬರ್ ನಲ್ಲಿ ಲೋಕಾಯುಕ್ತ ಪೊಲೀಸ್​ ವಿಭಾಗಕ್ಕೆ ವಹಿಸಿತ್ತು.

ಬಳಿಕ ಸರ್ಕಾರದ ಆದೇಶದಂತೆ ಲೋಕಾಯುಕ್ತ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆಯನ್ನು ಪ್ರತ್ಯೇಕ ತಂಡಕ್ಕೆ ವಹಿಸಲಾಗಿತ್ತು. 2013 ರ ಮಾರ್ಚ್ (March) 31ರ ವೇಳೆಗೆ ಡಿಕೆ ಶಿವಕುಮಾರ್ ಕುಟುಂಬ 33 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿತ್ತು. ಐದು ವರ್ಷಗಳ ಅವಧಿಯಲ್ಲಿ ಅವರ ಕುಟುಂಬದ ಆಸ್ತಿ 166.79 ಕೋಟಿ ರೂ.ಗೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ 113.12 ಕೋಟಿ ವಚ್ಚ ಮಾಡಲಾಗಿದೆ ಎಂಬ ಅಂಶ ಸಿಬಿಐ ಎಫ್​ಐಆರ್​ (FIR) ನಲ್ಲಿತ್ತು. ಇನ್ನು 2018ರ ವೇಳೆಗೆ ಡಿಕೆ ಶಿವಕುಮಾರ್ ಕುಟುಂಬ ಒಟ್ಟು 128.60 ಕೋಟಿ ಆಸ್ತಿ ಹೊಂದಿತ್ತು. ವರಮಾನ, ಸ್ವೀಕೃತಿ ಮತ್ತು ವೆಚ್ಚಕ್ಕೆ ಹೋಲಿಸಿದರೆ ಶೇಕಡ 44.93ರಷ್ಟು ಹೆಚ್ಚುವರಿ ಆಸ್ತಿ ಇರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ವರದಿ ನೀಡಿದೆ.

Exit mobile version