ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

Karnataka: ಇಂದು ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಇದೀಗ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಾಳಿ ನಡೆಸಿದ್ದಾರೆ.ಹಾವೇರಿ, ತುಮಕೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಕಚೇರಿ, ಅಧಿಕಾರಿಗಳ ನಿವಾಸ ಮತ್ತು ಕೆಲಸದ ಸ್ಥಳಗಳ ಮೇಲೆ ಲೋಕಾಯುಕ್ತರು (Lokayukta) ದಾಳಿ ನಡೆಸಿದ್ದಾರೆ.ಈ ಸರ್ಕಾರಿ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪವೇ ದಾಳಿಯ ಹಿಂದಿನ ಕಾರಣವಾಗಿದ್ದು, ಅವರ ಆದಾಯದ (Lokayukta raids in Karnataka) ಮೂಲ, ಆಸ್ತಿ ದಾಖಲೆಗಳು ಮತ್ತು ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ

ತುಮಕೂರಿನಲ್ಲಿ (Tumkur) ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ (Narasimhamurthy) ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನಗರದ ಆರ್.ಟಿ.ನಗರದಲ್ಲಿರುವ ಮನೆಯನ್ನು ಲೋಕಾಯುಕ್ತ ಡಿಎಸ್ಪಿಗಳಾದ ಮಂಜುನಾಥ್ ಮತ್ತು ಹರೀಶ್ ನೇತೃತ್ವದಲ್ಲಿ ಶೋಧ ನಡೆಸಲಾಯಿತು.

ಹುಡುಕಾಟದ ಸಮಯದಲ್ಲಿ, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.

ಹಾವೇರಿ ಜಿಲ್ಲೆಯಲ್ಲಿ ಸಹ ಲೋಕಾಯುಕ್ತ ದಾಳಿ

ಹಾವೇರಿ (Haveri) ಜಿಲ್ಲೆಯಲ್ಲಿ ಸಹ ಲೋಕಾಯುಕ್ತ ಧಾಳಿ ನಡೆದಿದ್ದು, ನಿರ್ಮಿತಿ ಕೇಂದ್ರದ ಎಂಜಿನಿಯರ್ ವಾಗೀಶ್ ಶೆಟ್ಟರ್ ಅವರ (Lokayukta raids in Karnataka) ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಣೆಬೆನ್ನೂರು ನಗರದ ನಿವಾಸದ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಹಾಗೂ ಹಾವೇರಿಯ ದೇವಗರಿ ಜಿಲ್ಲಾ ತೆರಿಗೆ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರಿನ ಎರಡು ಕಡೆ ಲೋಕಾಯುಕ್ತ ದಾಳಿ

ಬೆಂಗಳೂರಿನ ಬಸವೇಶ್ವರನಗರದಲ್ಲಿರುವ (Basaveshwaranagar) ಬೆಸ್ಕಾಂನ ತಾಂತ್ರಿಕ ನಿರ್ದೇಶಕ ರಮೇಶ್ (Ramesh) ಅವರ ಮನೆ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕೈಗಾರಿಕೆ ಮತ್ತು ಬಾಯ್ಲರ್ ಸಚಿವಾಲಯದ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿದ್ದಾರೆ.

ಮೈಸೂರಿನಲ್ಲೂ ಲೋಕಾಯುಕ್ತ ಕಾರ್ಯಾಚರಣೆ

ಮೈಸೂರು (Mysore) ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ (Mahesh Kumar)

ಅವರ ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿಯಿರುವ ನಿವಾಸದ ಮೇಲೆ ದಾಳಿ ನಡೆದಿದೆ. 13 ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿ ತೋಟದ ಮನೆ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮೇಲೂ ದಾಳಿ :
ಬೀದರ್ (Bidar) ಭೂಸೇನಾ ನಿಗಮದ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಿವೈಎಸ್ಪಿ ಓಲೇಕಾರ (Olaykara) ನೇತೃತ್ವದಲ್ಲಿ ಬೀದರ್ ಮತ್ತು ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮಗಳ ತೋಟದ ಮನೆಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದರು.

ಬೀದರ್ ಮತ್ತು ಚಿಟಗುಪ್ಪ ತಾಲೂಕಿನ ಮುತ್ತಂಗಿ ಗ್ರಾಮಗಳ ಫಾರಂಹೌಸ್‌ಗಳ ಮೇಲೂ ಲೋಕಾಯುಕ್ತರು ದಾಳಿ ನಡೆಸಿದರು.

ರಶ್ಮಿತಾ ಅನೀಶ್

Exit mobile version