ಲೋಕಸಭಾ ಚುನಾವಣೆ 2024: ವೋಟರ್​ ಐಡಿ ಇಲ್ಲವಾದಲ್ಲಿ ಈ ದಾಖಲೆಗಳೊಂದಿಗೆ ಮತದಾನ ಮಾಡಬಹುದು.

Bengaluru: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ (April) 26ರಂದು ಮೊದಲ ಹಂತದಲ್ಲಿ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ.7ರಂದು ಮತದಾನ ನಡೆಯಲಿದೆ. ಒಂದು ವೇಳೆ ನಿಮ್ಮಲ್ಲಿ ವೋಟರ್ ಐಡಿ ಕಾರ್ಡ್ (Voter ID Card) ಇಲ್ಲದಿದ್ದರೆ ಯಾವೆಲ್ಲಾ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು. ಅದು ಹೇಗೆ? ಇಲ್ಲಿದೆ ಇದರ ಸಂಪೂರ್ಣ ವಿವರ.

ಮತದಾನ ಮಾಡಲು ಪರ್ಯಾಯ ದಾಖಲೆಗಳು:
೧.ಆಧಾರ್ ಕಾರ್ಡ್ (Aadhar Card)
೨.MNREGA ಜಾಬ್ ಕಾರ್ಡ್
೩.ಬ್ಯಾಂಕ್/ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು
೪. ಕಾರ್ಮಿಕ ಸಚಿವಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ.
೫. ಪ್ಯಾನ್ ಕಾರ್ಡ್ (Pan Card).

೬. NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್
೭. ಭಾವಚಿತ್ರ ಹೊಂದಿರುವ ಪಿಂಚಣಿಯ ದಾಖಲೆ.
೮. ಕೇಂದ್ರ / ರಾಜ್ಯ ಸರ್ಕಾರ / ಪಿಎಸ್‌ಯು / ಪಬ್ಲಿಕ್ ಲಿಮಿಟೆಡ್ ಕಂಪನಿಗಳು (Public Limited Company) ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
೯. MPಗಳು/MLAಗಳು/MLC ಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
೧೦. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ID (UDID) ಕಾರ್ಡ್.

ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿಯಲ್ಲಿ ದೋಷಗಳಿದ್ದರೆ, ಇಲ್ಲವೆ ಗುರುತಿನ ಚೀಟಿ ತರದಿದ್ದ ಸಂದರ್ಭದಲ್ಲಿ ಭಾರತ ಆಯೋಗ ಪರಿಗಣಿಸಿರುವ ಮೇಲಿನ ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು. ಒಂದು ವೇಳೆ ಮತದಾರರ ಗುರುತಿನ ಚೀಟಿಯಲ್ಲಿ ದೋಷವಿದ್ದರೆ, ಇಲ್ಲವೆ ಮತದಾರರ ಗುರುತಿನ ಚೀಟಿಯಲ್ಲಿರುವ ವ್ಯಕ್ತಿಯ ಭಾವಚಿತ್ರ ಹೊಂದಾಣಿಕೆ ಆಗದಿದ್ದಾಗ ಮೇಲೆ ತಿಳಿಸಲಾಗಿರುವ ದಾಖಲಾತಿಗಳ ಪೈಕಿ ಒಂದನ್ನು ತೋರಿಸಿ ಮತ ಚಲಾಯಿಸಬಹುದು.

ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ: ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ ಮತದಾನದ ವೇಳೆ ಎಲ್ಲ ಮತ ಹಾಕಿದ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು (ಚುನಾವಣಾ ನೀತಿ ಸಂಹಿತೆ 1961ರ ನಿಯಮ 49K ಪ್ರಕಾರ) ಹಚ್ಚಲಾಗುತ್ತದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

Exit mobile version