ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು ಅಸ್ತಂಗತ

Vijayapura: ಶತಮಾನದ ಸಂತ, ನುಡಿದಂತೆ ನಡೆದ ಶರಣ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು(Lord Siddeshwar is immortal) (82) ಸೋಮವಾರ ಸಂಜೆ 6.05ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದ ಶ್ರೀಗಳು ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಶ್ರೀಗಳು ಕಳೆದ 15 ದಿನಗಳಿಂದ ಆಹಾರ ತ್ಯಜಿಸಿದ್ದರು,

ಕೆಲ ದಿನಗಳು ಕೇವಲ ದ್ರವ ರೂಪದ ಆಹಾರವನ್ನು ಸೇವಿಸುತ್ತಿದ್ದರು. ಸೋಮವಾರ ಮಧ್ಯಾಹ್ನದ ನಂತರ ನಾಡಿಮಿಡಿತ ,ರಕ್ತದೊತ್ತಡ, ಹಾಗೂ ಆಮ್ಲಜನಕ ಪ್ರಮಾಣ ಕಡಿಮೆಯಾಗುತ್ತಾ ಬಂದಿತ್ತು. ಹೀಗಾಗಿ ಕೃತಕ ಆಮ್ಲಜನಕ ಪೂರೈಸಲಾಗುತ್ತಿತ್ತು. ಕೊನೆಗೆ ರಾತ್ರಿ ಶ್ರೀಗಳು ದೇಹ ತ್ಯಜಿಸಿದರು.

ದರ್ಶನಕ್ಕಾಗಿ ಬಂದ ಭಕ್ತರ ಆಕ್ರಂದನ ಮುಗಿಲು ಮುಟ್ಟಿತ್ತು. ಶ್ರೀಗಳ ಅಂತಿಮ ದರ್ಶನ ಪಡೆಯುವುದಕ್ಕೆ ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರು ಆಗಮಿಸುತ್ತಿದ್ದಾರೆ.


ರಾತ್ರಿ 11 ಗಂಟೆ ನಂತರ ಆಶ್ರಮದಲ್ಲೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು. ಮಂಗಳವಾರ ಬೆಳಗ್ಗೆಯಿಂದ ಸೈನಿಕ ಶಾಲೆ ಆವರಣದಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು.
ಸೈನಿಕ ಶಾಲೆ ದರ್ಶನಕ್ಕೆ ಬರುವ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.

ಜಿಲ್ಲಾಧಿಕಾರಿ ಡಾ.ಮಹಾಂತೇಶ ದಾನಮ್ಮ(Lord Siddeshwar is immortal) ವಿಜಯಪುರ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿದ್ದಾರೆ.

ಸಂಜೆ 5 ಗಂಟೆಗೆ ಅಂತಿಮ ವಿಧಿ ವಿಧಾನ ನೆರವೇರಿಸಲು ಸರಕಾರ ಸಿದ್ಧತೆ ಕೈಗೊಂಡಿದೆ.
1941 ರ ಅಕ್ಟೋಬರ್ 24 ರಂದು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ ಶ್ರೀಗಳು ಜನಿಸಿದ್ದರು.

ಶ್ರೀಗಳ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ 4 ನೇ ತರಗತಿವರೆಗೆ ಓದಿದರು.

ನಂತರ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮಿಗಳವರನ್ನು ಆಶ್ರಯಿಸಿದರು. ಶ್ರೀಗಳು ತಾವು ಪ್ರವಚನ ಮಾಡುವ ಸ್ಥಳಗಳಿಗೆ ಸಿದ್ದೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು.

ನಂತರ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ(M.A) ಪದವಿಯನ್ನು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದರು.


ಶ್ರೀ ಸಿದ್ದೇಶ್ವರ ಶ್ರೀಗಳು ಎಂ.ಎ. ಪದವಿಯ ಸಮಯದಲ್ಲಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಪ್ರಕಟಿಸಿದರು,ಇದರಲ್ಲಿ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿದ್ದರು.

https://youtu.be/TX7v11MgGgo

ಶ್ರೀಗಳವರು ಪದ್ಮಶ್ರೀ(Padmashree award) ಪ್ರಶಸ್ತಿ ಸೇರಿದಂತೆ ಹಲವು ಅತ್ಯುನ್ನತ ಪ್ರಶಸ್ತಿಗಳನ್ನು ವಿನಯಪೂರ್ವಕವಾಗಿ ನಿರಾಕರಿಸಿದ್ದರು. ಶ್ರೀ ಸಿದ್ಧೇಶ್ವರರು ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದರು.

ಪ್ರಧಾನಿ ನರೇಂದ್ರ ಮೋದಿ(Narendra modi), ಸಿಎಂ ಬಸವರಾಜ ಬೊಮ್ಮಾಯಿ(Basavaraj bommai) ಸೇರಿದಂತೆ ಅನೇಕರು ಸಿದ್ಧೇಶ್ವರ ಸ್ವಾಮಿಗಳವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ದೂರವಾಣಿ ಕರೆ ಮೂಲಕ ಪ್ರಧಾನಿ ಮೋದಿ ಶ್ರೀಗಳವರ ಆರೋಗ್ಯ ವಿಚಾರಿಸಿದ್ದರು.

ಮಂಗಳವಾರ ಸಂಜೆ 5 ಗಂಟೆಗೆ ಶ್ರೀಗಳವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂದು ಶ್ರೀಗಳು ಕೆಲವು ವರ್ಷಗಳ ಹಿಂದೆಯೇ ಸಂಕಲ್ಪ ಮಾಡಿದ್ದರು.

Exit mobile version