ಎಲ್‌ಪಿಜಿ ಸಿಲಿಂಡರ್‌ ಸ್ಪೋಟ; ಏಳು ಮಂದಿ ಸಾವು

ಗುಜರಾತ್, ಜು. 24: ಇಲ್ಲಿನನ ಅಹಮದಾಬಾದ್ ನಗರದ ಹೊರವಲಯದಲ್ಲಿರುವ ಕೊಠಡಿಯೊಂದರಲ್ಲಿ ಅನಿಲ ಸೋರಿಕೆಯಾಗಿ ಎಲ್‌ಪಿಜಿ ಸಿಲಿಂಡರ್‌ ಸ್ಫೋಟಗೊಂಡು ಸಂಭವಿಸಿದ್ದ ಅವಘಡದಲ್ಲಿ ಗಾಯಗೊಂಡಿದ್ದವರ ಪೈಕಿ ಏಳು ಮಂದಿ ಮೃತಪಟ್ಟಿದ್ಧಾರೆ ಎಂದು ಪೊಲೀಸರು ತಿಳಿಸಿದರು.

ಈ ಘಟನೆ ಗುರುವಾರ ರಾತ್ರಿ (ಜು.20) ನಡೆದಿದೆ. ಈ ಅವಘಡದಲ್ಲಿ ಕಾರ್ಮಿಕರು ಮತ್ತು ಅವರ ಕುಟುಂಬದವರು ಸೇರಿ 10 ಜನರಿಗೆ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಸ್ಲಾಲಿ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಎಸ್‌.ಎಸ್‌ ಗಾಮೆಟಿ ಶುಕ್ರವಾರ ತಿಳಿಸಿದರು.

ಕಾರ್ಖಾನೆಯೊಂದರ ಕೆಲವು ಕಾರ್ಮಿಕರು ಮತ್ತು ಅವರ ಕುಟುಂಬದವರು ಸಣ್ಣ ಕೊಠಡಿಯೊಂದರಲ್ಲಿ ಮಲಗಿದ್ದರು. ಈ ವೇಳೆ ಎಲ್‌ಪಿಜಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿದೆ. ಈ ಬಗ್ಗೆ ಎಚ್ಚರಿಕೆ ನೀಡಲು ನೆರೆ ಮನೆಯವರು ಬಾಗಿಲು ತಟ್ಟಿದ್ಧಾರೆ. ಈ ವೇಳೆ ಕಾರ್ಮಿಕರು ಲೈಟ್‌ ಸ್ವಿಚ್‌ ಆನ್‌ ಮಾಡಿದ್ದರಿಂದ ಅನಿಲ ತುಂಬಿದ ಕೊಠಡಿಯಲ್ಲಿ ಸ್ಪೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

Exit mobile version