Scissors in people’s pockets on the first day of the month: LPG cylinder price hiked again.
Bengaluru: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ತಿಂಗಳ ಮೊದಲ ದಿನವೇ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದಿನಿಂದಲೇ ಹೊಸ ದರಗಳು ಅನ್ವಯವಾಗಲಿದೆ. ಇಂದು ಬೆಳಗ್ಗಿನಿಂದ ಎಲ್ಪಿಜಿ ಸಿಲಿಂಡರ್ (LPG Cylinder) ಬೆಲೆ ಹೆಚ್ಚಳ ಮಾಡಲಾಗಿದೆ.
1ನೇ ಅಕ್ಟೋಬರ್ (October) 2024 ರಿಂದಲೇ ಇಂಧನ ಕಂಪನಿಗಳು ಬೆಲೆಯನ್ನು ಹೆಚ್ಚಳ ಮಾಡಿಕೊಂಡಿವೆ. ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಮಾತ್ರ ಏರಿಕೆಯಾಗಿದೆ. ನೆಮ್ಮದಿಯ ವಿಚಾರವೇನೆಂದರೆ ಗೃಹ ಬಳಕೆಯ 14 ಕೆಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಇನ್ನು ಐಓಸಿಎಲ್ ವೆಬ್ಸೈಟ್ (IOCL Website) ಪ್ರಕಾರ, 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ನ ಹೊಸ ಬೆಲೆಗಳು ಇಂದಿನಿಂದ ಅನ್ವಯವಾಗಲಿವೆ. ಜುಲೈ-2024 ನಂತರ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜುಲೈನಲ್ಲಿ ಆಯಿಲ್ ಮಾರ್ಕೆಟಿಂಗ್ (Oil Marketing) ಕಂಪನಿಗಳು ಬೆಲೆಗಳನ್ನು ಕೊಂಚ ಇಳಿಕೆ ಮಾಡಿಕೊಂಡಿದ್ದವು.ಆದರೆ ಆಗಸ್ಟ್ನಲ್ಲಿ 8.50 ರೂಪಾಯಿ ಏರಿಕೆಯಾಗಿತ್ತು. ನಂತರ ಇದೀಗ ಮೂರು ತಿಂಗಳು ಸೇರಿ ಒಟ್ಟು 39 ರೂಪಾಯಿ ಬೆಲೆ ಏರಿಕೆಯಾಗಿದೆ. ಆದರೆ ಹೊಸ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತವೆ. ದೆಹಲಿಯಿಂದ ಮುಂಬೈನವರೆಗೂ ಬೆಲೆಗಳು ಭಿನ್ನವಾಗಿರುತ್ತವೆ.
ಮುಂಬೈನಲ್ಲಿ 1644 ರೂಪಾಯಿಯಿದ್ದ 19 ಕೆಜಿ ಸಿಲಿಂಡರ್ ಬೆಲೆ ಇದೀಗ 1,692.50 ರೂ ಆಗಿದೆ. ಕಳೆದ ತಿಂಗಳು ಸೆಪ್ಟೆಂಬರ್ನಲ್ಲಿ 39 ರೂ.ಗಳಷ್ಟು ಏರಿಕೆಯಾಗಿತ್ತು. ಇದೀಗ ಮತ್ತೊಮ್ಮೆ ಏರಿಕೆ ಕಂಡಿದೆ.ಕೋಲ್ಕತ್ತಾದಲ್ಲಿ 1,802.50 ರೂ.ನಿಂದ 1,850.50 ರೂ.ಆಗಿದೆ. ಚೆನ್ನೈನಲ್ಲಿ (Chennai) 1,855 ರೂ.ಯಿದ್ದ 19 ಕೆಜಿ ಸಿಲಿಂಡರ್ ಬೆಲೆ 1,903 ರೂ.ಆಗಿದೆ. ಬೆಂಗಳೂರಿನಲ್ಲಿಯೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 48 ರೂಪಾಯಿ ಏರಿಕೆಯಾಗಿದೆ. ಸದ್ಯ 19 ಕೆಜಿ ಸಿಲಿಂಡರ್ ಬೆಲೆ 1,818 ರೂಪಾಯಿ ಆಗಿದೆ.