ಲಕ್ಟೋ ಅ 14: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿದ್ದ ಪೂಜೆ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ. ದುರ್ಗಾ ಪೂಜೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿಯ ಫೈಜಾಬಾದ್ ಉತ್ಸಾಲಿ ಬಳಿ ನಡೆದಿದೆ.
ದಾಳಿಯಲ್ಲಿ ಗಾಯಗೊಂಡ ಬಾಲಕಿಯರಿಗೆ ಲಕ್ಕೋದಲ್ಲಿರುವ ಕೆಜಿಎಂಯು ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನಿಗೆ ಸ್ಥಳೀಯ ಆಸತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಈ ಪ್ರಕರಣದ ಹಿನ್ನಲೆಯಲ್ಲಿ ಸದ್ಯಕ್ಕೆ ಎರಡೂ ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದ ಕಾರಣದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ಲಖನೌ ವಲಯದ ಎಡಿಜೆ ಎಸ್.ಎನ್.ಸಬತ್ ಹೇಳಿದ್ದಾರೆ.
ಎರಡು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ, ಮಂಜೀತ್ ಯಾದವ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಸೇರಿದಂತೆ ಮೂವರಿಗೆ ಗಾಯಗಳಾಗಿದೆ ಎಂದು ಅಯೋಧ್ಯೆಯ ಎಸ್‌ಎಸ್ ಪಿವೈಲೇಶ್ ಪಾಂಡೆ ತಿಳಿಸಿದರು. ಈ ಸಂಬಂಧ ಫೈಜಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.