ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಧು ಬಂಗಾರಪ್ಪ: ಸಿದ್ದರಾಮಯ್ಯ ಭೇಟಿಯಾಗಿ ಚರ್ಚೆ

ಬೆಂಗಳೂರು, ಮಾ. 11: ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಕಾಲ‌ ಕೂಡಿ ಬಂದಿದ್ದು, ಗುರುವಾರ ಕಾಂಗ್ರೆಸ್‌ ಸೇರಲಿದ್ದಾರೆ.

ಈಗಾಗಲೇ ಜೆಡಿಎಸ್‌ ತೊರೆದಿರುವ ಮಧು ಬಂಗಾರಪ್ಪ ಇಂದು ಬೆಳಗ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಬೆಂಗಳೂರಿನ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ ಮಧೂ ಬಂಗಾರಪ್ಪ, ಕೆಲ ಕಾಲ ಸಮಾಲೋಚನೆ ನಡೆಸಿದರು. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಆದರೆ ಸೇರ್ಪಡೆಯಾಗುವ ದಿನಾಂಕ ಇದುವರೆಗೆ ನಿಗದಿಯಾಗಿಲ್ಲ.

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತೊರೆಯುವ ಬಗ್ಗೆ ಸುಳಿವು ನೀಡಿದ್ದ ಮಧು ಬಂಗಾರಪ್ಪ, ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಮೊದಲು ಸೂಕ್ತ ರಾಜಕೀಯ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದರು.

Exit mobile version