ಮಧ್ಯಾಹ್ನದಿಂದ ಬಸ್ ಸಂಚಾರ ಆರಂಭ

ಬೆಂಗಳೂರು, ಡಿ. 14: ಸಾರಿಗೆ ನೌಕರರನ್ನು ಸರ್ಕಾರಿ ನೌಕರರಾಗಿ ಮಾಡಬೇಕೆಂಬುದು ಪ್ರಮುಖ ಬೇಡಿಕೆಯನ್ನಿಟ್ಟುಕೊಂಡು, ಸತತ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾರಿಗೆ ನೌಕರರು, ಇಂದು 11 ಗಂಟೆಗೆ ಪ್ರತಿಭಟನೆ ಹಿಂಪಡೆಯಲು ಮುಂದಾಗಿದ್ದಾರೆ. ಆದರೆ ಇನ್ನೂ ಅಂತಿಮ ಘೋಷಣೆಯನ್ನು ಮಾಡಿಲ್ಲ.

ಈ ಹಿನ್ನೆಲೆ ಮಧ್ಯಾಹ್ನದ ವೇಳೆಗೆ ಕೆಎಸ್ಆರ್‌ಟಿಸಿ ಹಾಗೂ ಬಿಎಂಟಿಸಿ ಸಂಚಾರ ಪ್ರಾರಂಭವಾಗುವುದು ಖಚಿತವಾಗಿದೆ. ನಿನ್ನೆ ರಾತ್ರಿ ಶಕ್ತಿಸೌಧದಲ್ಲಿ ನಡೆದ ಸಭೆಯಲ್ಲಿ ಕೆಎಸ್ಆರ್‌ಟಿಸಿ ಅಧ್ಯಕ್ಷ ಚಂದ್ರು, ಗೃಹ ಸಚಿವ ಬಸವರಾಜ್‌ ಬೊಮ್ಮಯಾಯಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಮತ್ತು ಕಾನೂನು ಸಚಿವ ಅಶೋಕ್ರವರ ಮುಂದೆ ಮುಷ್ಕರ ಬಿಡುವುದಾಗಿ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಒಂದು ಬೇಡಿಕೆಯನ್ನು ಹೊರತುಪಡಿಸಿ ಉಳಿದೆಲ್ಲಾ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸರ್ಕಾರದ ಸಮಾಧಾನಕರವಾಗಿದೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತಷ್ಟು ಚಿಂತನೆ ನಡೆಸಿ ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಚಿಂತನೆ ನಡೆಸುವುದಾಗಿ ಎಲ್ಲಾ ನಾಯಕರು ತೀರ್ಮಾನ ಮಾಡಿದ್ದಾರೆ. ಈ ನಿರ್ಧಾರ ಕೇವಲ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಬಾರದೆಂಬ ನಿಟ್ಟಿನಲ್ಲಿ ಎಂದು ತಿಳಿದು ಬಂದಿದೆ.  

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಧ್ಯಾಹ್ನದಿಂದ ಬಸ್‌ ಸಂಚಾರ ಆರಂಭಿಸಲು ಸಾರಿಗೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಹುಬ್ಬಳ್ಳಿ, ಹಾಸನ, ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಸ್‌ ಸಂಚಾರ ಆರಂಭವಾಗಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗೆ ಇಳಿದಿವೆ. ಬೆಳಗಾವಿಯಲ್ಲೂ ಸಾರಿಗೆ ನೌಕರರು ಮುಷ್ಕರ ವಾಪಸ್‌ ಪಡೆದಿದ್ದಾರೆ.  

Exit mobile version