ಚಾಮರಾಜನಗರ, ಮಾ. 10: ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸರಳವಾಗಿ ಶಿವರಾತ್ರಿ ಜಾತ್ರಾ ಆಚರಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಇಂದಿನಿಂದ (ಮಾ.10) 5 ದಿನಗಳ ಕಾಲ ಹೊರಗಿನ ಭಕ್ತರಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಮಲೆಮಹದೇಶ್ವರ ರಥೋತ್ಸವಕ್ಕೆ ಪ್ರತಿವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುತ್ತಾರೆ. ಅದರೆ, ಈ ಬಾರಿ ಕೊರೊನಾ ಸೋಂಕು ಹರಡುವ ಭೀತಿಯಿಂದ ಬೆಟ್ಟಕ್ಕೆ ಹೊರ ಭಾಗದಿಂದ ಬರುವ ಭಕ್ತಾದಿಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ಭಕ್ತರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ.