Visit Channel

ಮಹಾಮಾರಿ ಕೊರೊನಾ ಎಫೆಕ್ಟ್‌: ಮಲೆ ಮಹದೇಶ್ವರ ಬೆಟ್ಟದಲ್ಲಿ ಉಗಾದಿ ರಥೋತ್ಸವ ರದ್ದು

WhatsApp Image 2021-04-10 at 11.56.36 AM

ಚಾಮರಾಜನಗರ, ಏ. 10: ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಪ್ರಯುಕ್ತ ಏಪ್ರಿಲ್ 13 ರಂದು ನಡೆಯಬೇಕಾಗಿದ್ದ ರಥೋತ್ಸವವನ್ನು ರದ್ದುಗೊಳಿಸಲಾಗಿದೆ.

ಕೊರೋನಾ ಸಾಂಕ್ರಮಿಕ ಹಿನ್ನೆಲೆಯಲ್ಲಿ ರಥೋತ್ಸವ ನಡೆಯುವುದೇ ಅನುಮಾನವಾಗಿತ್ತು ಮತ್ತು ದೇವಾಲಯ ಪ್ರಾಧಿಕಾರವು ಶನಿವಾರ ಈ ಬಗ್ಗೆ ತೀರ್ಮಾನ ಪ್ರಕಟಿಸುವುದಾಗಿ ಹೇಳಿತ್ತು. ದೇವಾಲಯದ ಎದುರು ರಥವನ್ನೂ ತಂದು ನಿಲ್ಲಿಸಲಾಗಿತ್ತು. 500 ಜನರಿಗೆ ಸೀಮಿತವಾಗಿ ಸಂಪ್ರದಾಯದಂತೆ ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅನುಮತಿ ನೀಡಿದ್ದರು.

ಆದರೆ, ರಥೋತ್ಸವ ಸಂದರ್ಭದಲ್ಲಿ 30 ಜನ ಅರ್ಚಕರು, ಕಳಸ ಹೊತ್ತ 108 ಹೆಣ್ಣುಮಕ್ಕಳು, ಕುಟುಂಬಸ್ಥರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಗ್ರಾಮಸ್ಥರು ಸೇರಿದಂತೆ ಸುಮಾರು 2ರಿಂದ 3 ಸಾವಿರ ಜನ ಸೇರುವ ಅವಕಾಶವಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಥೋತ್ಸವವನ್ನು ರದ್ದು ಮಾಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ತಿಳಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ಪ್ರಾರಂಭವಾದಾಗಿನಿಂದ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವವನ್ನು ರದ್ದು ಮಾಡಿರಲಿಲ್ಲ. ಕಳೆದ ವರ್ಷ ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್ ಘೋಷಣೆ ಮಾಡಿದ್ದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಯುಗಾದಿ ಜಾತ್ರಾ ರಥೋತ್ಸವವನ್ನು ರದ್ದು ಮಾಡಲಾಗಿತ್ತು. ಈ ಬಾರಿ ರಥೋತ್ಸವಕ್ಕೆ ಅವಕಾಶ ನೀಡಿದ್ದರು ಸಹ ಸ್ಥಳೀಯರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರಿಂದ ಕೋವಿಡ್ ಮಾರ್ಗಸೂಚಿಯನ್ನು ಪಾಲನೆ ಮಾಡಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆ ಎರಡನೇ ಬಾರಿ ಯುಗಾದಿ ಜಾತ್ರಾ ರಥೋತ್ಸವ ಮಾಡಲಾಗಿದೆ ಎಂದು ತಿಳಿದು ಬಂದಿದೆ

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.