ಕೊರೋನಾ ಹಾವಳಿ ಹಿನ್ನಲೆ ೧೦ ಹಾಗೂ ೧೨ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದ ಮಹಾರಾಷ್ಟ್ರ

ಮುಂಬೈ, ಏ. 12: ಕೊರೊನಾ ಪ್ರಕರಣಗಳು ದಿನೇದಿನೇ ಹೆಚ್ಚಳವಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಜನರು ಸೋಂಕಿಗೆ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮಹಾರಾಷ್ಟ್ರ ಸರ್ಕಾರ ಮುಂದೆ ಹಾಕಿದ್ದು, 10ನೇ ತರಗತಿ ಪರೀಕ್ಷೆ ಜೂನ್ ವೇಳೆ ಹಾಗೂ 12ನೇ ತರಗತಿ ಪರೀಕ್ಷೆಗಳು ಮೇ ಅಂತ್ಯದ ವೇಳೆ ನಡೆಸುವ ಬಗ್ಗೆ ಶಿಕ್ಷಣ ಸಚಿವರಾದ ವರ್ಷಾ ಗಾಯಕ್​ವಾಡ್ ಮಾಹಿತಿ ನೀಡಿದ್ದಾರೆ. ಕೊರೊನಾ ಪರಿಸ್ಥಿತಿಯನ್ನು ಅವಲಂಬಿಸಿ ಪರೀಕ್ಷಾ ದಿನಾಂಕ ಘೋಷಿಸಲಾಗುವುದು ಎಂದು ತಿಳಿಸಲಾಗಿದೆ.

ಸದ್ಯದ ಪರಿಸ್ಥಿತಿಯು ಪರೀಕ್ಷೆ ಸಡೆಸಲು ಯೋಗ್ಯವಾಗಿಲ್ಲ. ಆರೋಗ್ಯವೇ ಸರ್ಕಾರದ ಮೊದಲ ಆದ್ಯತೆ ಎಂದು ಗಾಯಕ್​ವಾಡ್ ಟ್ವಿಟರ್​ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ. ಈ ನಿರ್ಧಾರವು ವಿದ್ಯಾರ್ಥಿಗಳು, ಶಿಕ್ಷಕರು, ರಾಜಕಾರಣಿಗಳು, ಶಿಕ್ಷಣ ತಜ್ಞರನ್ನು ಸಂಪರ್ಕಿಸಿದ ಬಳಿಕವೇ ತೆಗೆದುಕೊಂಡದ್ದಾಗಿದೆ ಎಂದು ಅವರು ಹೇಳಿದ್ದಾರೆ. CBSE, ICSE, IB ಹಾಗೂ ಕ್ಯಾಂಬ್ರಿಡ್ಜ್ ಬೋರ್ಡ್​ಗಳಿಗೂ ಪರೀಕ್ಷೆ ಮುಂದೂಡುವಂತೆ ಕೇಳಿಕೊಳ್ಳುತ್ತೇವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಆರೋಗ್ಯ ಸಚಿವ ಏಪ್ರಿಲ್ 14ರ ವರೆಗೆ ಮಹಾರಾಷ್ಟ್ರದಲ್ಲಿ ಲಾಕ್​ಡೌನ್ ಇರುವುದಿಲ್ಲ. ರಾಜ್ಯದಲ್ಲಿ ಲಾಕ್​ಡೌನ್ ಘೋಷಿಸುವ ಬಗ್ಗೆ ಏಪ್ರಿಲ್ 14ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

Exit mobile version