ಮಹಾರಾಷ್ಟ್ರ ಮಳೆ: ಮೃತರ ಸಂಖ್ಯೆ 60ಕ್ಕೆ ಏರಿಕೆ

ಮಹಾರಾಷ್ಟ್ರ, ಜು. 23: ಇಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪ್ರವಾಹದ ಸ್ಥಿತಿ ಏರ್ಪಟ್ಟಿದ್ದು, ಅಲ್ಲಲ್ಲಿ ಭೂಕುಸಿತದ ವರದಿಗಳಾಗಿವೆ. ರಾಜ್ಯದಾದ್ಯಂತ ಮೃತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

ರಾಯಗಢ ಜಿಲ್ಲೆಯೊಂದರಲ್ಲೇ ಭೂಕುಸಿತ ಮತ್ತು ಪ್ರವಾಹಕ್ಕೆ ಕನಿಷ್ಠ 36 ಮಂದಿ ಮೃತರಾಗಿದ್ದಾರೆ. ಪಶ್ಚಿಮ ಮಹಾರಾಷ್ಟ್ರದ ಕೊಂಕಣ ಬೆಲ್ಟ್‌ನಲ್ಲಿ ಸಂಭವಿಸಿದ ಸರಣಿ ಭೂಕುಸಿತ ಅವಘಡಗಳಲ್ಲಿ 12ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ.

ಮುಂಬೈನಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಪ್ರಾಥಮಿಕ ವರದಿ ಅನುಸಾರ ರಾಯಗಢದಲ್ಲಿ 30-35 ಮಂದಿ ಮೃತ ಪಟ್ಟಿದ್ದಾರೆ. ರಕ್ಷಣಾ ಕಾರ್ಯ ಬರದಿಂದ ಸಾಗಿದೆ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಠಾಕ್ರೆ ತಿಳಿದ್ದಾರೆ.
ಮಹಾರಾಷ್ಟ್ರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. 2005 ಮತ್ತು 1967ರಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಈ ಬಾರಿ ಸಂಭವಿಸಿದೆ ಎನ್ನಲಾಗುತ್ತಿದೆ.

Exit mobile version