ಮಹಾರಾಷ್ಟ್ರ ಮಳೆ: ಕೊಂಕಣ ರೈಲ್ವೆ ಸಂಚಾರ ಅಸ್ತವ್ಯಸ್ತ, ರೈಲುಗಳಲ್ಲಿರುವ 6,000 ಪ್ರಯಾಣಿಕರು

ಮುಂಬೈ, ಜು. 22: ಮಹಾರಾಷ್ಟ್ರದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ರತ್ನಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದ ರೈಲು ಸಂಚಾರ ಅಸ್ತವ್ಯಸ್ತಗೊಂಡು, ಸುಮಾರು 6,000 ಪ್ರಯಾಣಿಕರು ವಿವಿಧ ರೈಲುಗಳಲ್ಲಿ ಸಿಲುಕಿಕೊಂಡಿದ್ದಾರೆ.

ನದಿ ಉಕ್ಕಿ ಹರಿಯುತ್ತಿರುವುದರಿಂದ ಹಳಿಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ 9 ರೈಲುಗಳ ಸೇವೆಯನ್ನು ನಿಯಂತ್ರಿಸಲಾಗಿದೆ. ಅಂದರೆ, ಕೆಲ ರೈಲುಗಳ ಸಂಚಾರವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದರೆ, ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಮತ್ತೆ ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ.

ಈ ರೈಲುಗಳು ವಿವಿಧ ನಿಲ್ದಾಣಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿವೆ. ಅವುಗಳಲ್ಲಿದ್ದ ಪ್ರಯಾಣಿಕರು ಸಹ ಸುರಕ್ಷಿತರಾಗಿದ್ದಾರೆ. ಅವರಿಗೆ ಆಹಾರ ಮತ್ತು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಕೊಂಕಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಚಿಪ್ಲುನ್‌ನಲ್ಲಿನ ಪ್ರವಾಹ ಪರಿಸ್ಥಿತಿಯಿಂದಾಗಿ, ಇದುವರೆಗೆ ಒಂಬತ್ತು ದೂರದ ರೈಲುಗಳನ್ನು ನಿಯಂತ್ರಿಸಲಾಗಿದೆ ಎಂದು ಕೊಂಕಣ ರೈಲ್ವೆ ಮಾಹಿತಿ ನೀಡಿದೆ. ಈ ಪೈಕಿ ದಾದರ್-ಸಾವಂತ್ವಾಡಿ ವಿಶೇಷ ರೈಲು ಚಿಪ್ಲುನ್ ನಿಲ್ದಾಣದಲ್ಲಿ ಮತ್ತು ಖೇಡ್ ನಿಲ್ದಾಣದಲ್ಲಿ ಸಿಎಸ್ಎಂಟಿ-ಮಡ್ಗಾಂವ್ ಜನತಾಬ್ಡಿ ವಿಶೇಷ ರೈಲುಗಳನ್ನು ನಿಯಂತ್ರಿಸಲಾಗಿದೆ. ಈ ರೈಲುಗಳಲ್ಲಿನ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಕೊಂಕಣ ರೈಲ್ವೆ ವಕ್ತಾರ ಗಿರೀಶ್ ಕರಂದಿಕರ್ ಹೇಳಿದ್ದಾರೆ.

Exit mobile version