ಮುಂಬೈ, ಜು. 20: ಅಶಕ್ತರು ವಿವಿಧ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವವರ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಆಗಸ್ಟ್ 1 ರಿಂದ ಆರಂಭಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಮತ್ತು ಮುಂಬೈ ಮಹಾನಗರ ಪಾಲಿಗೆ ಮಂಗಳವಾರ ಬಾಂಬೆ ಹೈಕೋರ್ಟ್ಗೆ ತಿಳಿಸಿದೆ.
ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್.ಕುಲಕರ್ಣಿ ಅವರನ್ನೊಳ ಗೊಂಡ ವಿಭಾಗೀಯ ಪೀಠ, ಸರ್ಕಾರ ಕೈಗೊಂಡಿರುವ ಕ್ರಮಕ್ಕೆ ಸಂತಸ ವ್ಯಕ್ತಪಡಿಸಿದೆ.
ಮುಂಬೈನಲ್ಲಿರುವ ಅಶಕ್ತ, ಹಾಸಿಗೆ ಹಿಡಿದಿರುವ ಹಾಗೂ ಲಸಿಕೆ ಕೇಂದ್ರಗಳಿಗೆ ತೆರಳಲು ಸಾಧ್ಯವಾಗದ ಸುಮಾರು 3505 ಮಂದಿ ಮನೆಗೆ ಬಂದು ಲಸಿಕೆ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಆಗಸ್ಟ್ 1 ರಿಂದ ಮನೆ ಮನೆಗೆ ತೆರಳಿ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗುವ ಕುರಿತು ಸರ್ಕಾರ ಆದೇಶ ಹೊರಡಿಸಲಿದೆ.