Visit Channel

ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಇನ್ನಿಲ್ಲ

6ad754fb6c5ddafb0ff5ed374cb67a47f924553bb09ce14dc0abfaf44f437c4b

ಬೆಂಗಳೂರು, ಡಿ. 16: ಮಾಜಿ ಮುಖ್ಯಮಂತ್ರಿ ದಿವಂಗತ ಗುಂಡೂರಾವ್ ಅವರ ಸಚಿವ ಸಂಪುಟದಲ್ಲಿ ರೇಷ್ಮೆ ಖಾತೆ ಸಚಿವರಾಗಿ ಕೆಲಸ ನಿರ್ವಹಿಸಿದ್ದ ರಾಜ್ಯ ರಾಜಕೀಯದಲ್ಲಿ ತನ್ನದೇಯಾದ ಛಾಪು ಮೂಡಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ (78) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  

ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಇಂದು ಬೆಳಗ್ಗೆ ದಿಢೀರ್ ಹೃದಯಾಘಾತದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕೊರೋನಾ ಇಡೀ ದೇಶಕ್ಕೆ ವ್ಯಾಪಿಸಿದ್ದ ಸಂದರ್ಭದಲ್ಲಿ ಹಿರಿಯ ರಾಜಕಾರಣಿ ರೇಣುಕಾ ರಾಜೇಂದ್ರನ್ ಅವರಿಗೂ ಸಹ ಸೋಂಕು ತಗುಲಿತ್ತು. ಆದರೆ, ಅವರು ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಇಂದು ದುರಾದೃಷ್ಟವಶಾತ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ದಿವಂಗತ ಸಚಿವೆ ರೇಣುಕಾ ರಾಜೇಂದ್ರನ್ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲೇ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 


ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಇಬ್ಬರು ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರ ಅಗಲಿಕೆಗೆ ಇಡೀ ರಾಜಕೀಯ ವಲಯದ ಪ್ರಮುಖ ಗಣ್ಯರು ಮತ್ತು ನಾಯಕರು ಸಂತಾಪ ಸೂಚಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.