ಕಾಂಗ್ರೆಸ್ ಪಕ್ಷದಲ್ಲಿ (Congress Party) ಕಳೆದ ಒಂದು ವಾರದಿಂದ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಭಾರಿ ಹಣಾಹಣಿ ನಡೆಯುತ್ತಿದೆ.
ಈ ಪೈಕಿ ಶಶಿ ತರೂರ್, ಅಶೋಕ್ ಗೆಹ್ಲೋಟ್ (Ashok Gehlot) ಪ್ರಥಮವಾಗಿ ಕಣಕ್ಕಿಳಿಯಲು ಸಜ್ಜಾಗಿದ್ದರು.ಆದ್ರೆ ಕೆಲವೊಂದು ಕಾರಣಗಳಿಂದ ಇದು ನೆರವೇರಲಿಲ್ಲ!
ಸದ್ಯ ಗಾಂಧಿ ಕುಟುಂಬದವರು ಯಾರೂ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ ಎಂದು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಹೇಳಿದ ಬಳಿಕ, ಚುನಾವಣೆಗೆ ಕಾಂಗ್ರೆಸ್ ನಾಯಕರಲ್ಲಿ ಚುರುಕು ಸ್ಪರ್ಧೆ ಹುಟ್ಟಿಕೊಂಡಿತು.
ಕಾಂಗ್ರೆಸ್ ನಾಯಕರ ಪೈಕಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ನಾಮಪತ್ರ (Nomination) ಸಲ್ಲಿಸಿದ ಒಂದು ದಿನದ ನಂತರ,
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಶನಿವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಸ್ಥಾನಕ್ಕೆ ರಾಜೀನಾಮೆ(Resign) ನೀಡಿದ್ದಾರೆ (Mallikarjun Kharge resigns rajyasabha)ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : https://vijayatimes.com/weird-railway-stations-of-india/
ಒಬ್ಬ ನಾಯಕ ಒಂದು ಹುದ್ದೆ ಎಂಬ ಉದಯಪುರ ನಿರ್ಣಯದ ನಂತರ, ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ರಾಜೀನಾಮೆಯನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
ಪಿ. ಚಿದಂಬರಂ ಮತ್ತು ದಿಗ್ವಿಜಯ್ ಸಿಂಗ್ ಅವರು ಖರ್ಗೆ ಅವರ ಉತ್ತರಾಧಿಕಾರಿಯಾಗುವ ರೇಸ್‌ನಲ್ಲಿದ್ದಾರೆ.
ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge resigns rajyasabha), ಶಶಿ ತರೂರ್ ಮತ್ತು ಕೆಎನ್ ತ್ರಿಪಾಠಿ ನಾಮಪತ್ರ ಸಲ್ಲಿಸಿದರು.
ಆದರೆ, ಜಿ-23 ನಾಯಕರಾದ ಪೃಥಿವಿರಾಜ್ ಚವಾಣ್, ಮನೀಶ್ ತಿವಾರಿ ಮತ್ತು ಭೂಪಿಂದರ್ ಹೂಡಾ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.
ಸದ್ಯ ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದ ದಿಗ್ವಿಜಯ ಸಿಂಗ್ ಅವರು ಪಕ್ಷದ ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ಬದಲಿಗೆ ತಮ್ಮ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುವುದಾಗಿ ಘೋಷಿಸಿದ್ದರು.
ಇದನ್ನೂ ಓದಿ : https://vijayatimes.com/will-jio-customers-get-5g/
ಮಲ್ಲಿಕಾರ್ಜುನ್ ಖರ್ಗೆ ಅವರ ನಾಮಪತ್ರವನ್ನು ಕಾಂಗ್ರೆಸ್ ಪಕ್ಷ ಪೂರಕವಾಗಿ ಸ್ವೀಕರಿಸಿದೆ.
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರೊಟ್ಟಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.