ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಸೋನಿಯಾ ಆಪ್ತ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುವ ಸಾಧ್ಯತೆ

INC

New Delhi : ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ಹಿರಿಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ್‌ ಖರ್ಗೆ(Mallikarjun Kharge to contest) ಅವರು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಈ ಕುರಿತು ಕಾಂಗ್ರೆಸ್‌ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ(Mallikarjun Kharge to contest) ಇಂದು ಅಂತಿಮ ಸಭೆ ನಡೆಸಲಿದ್ದಾರೆ.

ಅಧ್ಯಕ್ಷ ಚುನಾವಣೆಯಲ್ಲಿ ಶಶಿ ತರೂರ್ ಮತ್ತು ದಿಗ್ವಿಜಯ ಸಿಂಗ್ ಅವರೊಂದಿಗೆ ಮಲ್ಲಿಕಾರ್ಜುನ್‌ ಖರ್ಗೆ ಮೂರನೇ ಅಭ್ಯರ್ಥಿಯಾಗಬಹುದು.

https://vijayatimes.com/sc-verdict-over-termination-pregnancy/

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಂಟು ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಲೋಕಸಭೆ ಮತ್ತು ರಾಜ್ಯಸಭಾ ಸಂಸದರಾಗಿದ್ದಾರೆ.

ಇದನ್ನೂ ನೋಡಿ : https://fb.watch/fScULwGjhR/

ದಲಿತ ಸಮುದಾಯದ ನಾಯಕರಾಗಿರುವ ಖರ್ಗೆ ಅವರು ಮಾಜಿ ಕೆಪಿಸಿಸಿ ಅಧ್ಯಕ್ಷರು, ಮಾಜಿ ರಾಜ್ಯ ಗೃಹ ಸಚಿವರು ಮತ್ತು ಕೇಂದ್ರ ರೈಲ್ವೆ ಸಚಿವರೂ ಆಗಿದ್ದರು.

ಇನ್ನು ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ ಸಿಂಗ್ ಇಂದು ನಾಮಪತ್ರ(Nomination) ಸಲ್ಲಿಸುವ ಸಾಧ್ಯತೆ ಇದ್ದು, ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ಕದನ ತೀವ್ರಗೊಂಡಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್(Ashok Gehlot) ಅವರು ರೇಸ್ನಿಂದ ಹೊರಗುಳಿದ ನಂತರ ಮಲ್ಲಿಕಾರ್ಜುನ್‌ ಖರ್ಗೆ ಹೆಸರು ಬಲವಾಗಿ ಕೇಳಿ ಬರುತ್ತಿದೆ.

ಇನ್ನೊಂದೆಡೆ ಪೃಥಿವಿರಾಜ್ ಚವಾಣ್, ಮನೀಶ್ ತಿವಾರಿ, ಭೂಪಿಂದರ್ ಹೂಡಾ ಸೇರಿದಂತೆ ಅನೇಕ ಜಿ-23 ನಾಯಕರು ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.

https://youtu.be/Q3d-exudhek COVER STORY PROMO |

ಮೂಲಗಳ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಪೂರ್ವಭಾವಿಯಾಗಿ ಹೊರಹೊಮ್ಮುವ ಸಂಪೂರ್ಣ ಪರಿಸ್ಥಿತಿಯ ಬಗ್ಗೆ ಜಿ-23 ನಾಯಕರು ಚರ್ಚಿಸಿದರು ಎನ್ನಲಾಗಿದೆ.

ಇನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು (ಸೆಪ್ಟೆಂಬರ್ 30) ಕೊನೆಯ ದಿನವಾಗಿದ್ದು, ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ.

ಈ ಬಾರಿ ಗಾಂಧಿ ಪರಿವಾರದಿಂದ ಯಾರೂ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಪ್ರಿಯಾಂಕಾ ವಾದ್ರಾ ಹೆಸರು ಕೂಡಾ ಅಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು.

Exit mobile version