ಇಂಡಿಯಾ ಮೈತ್ರಿಕೂಟ ಒಂದಾಗಿರಲು ಶ್ರಮಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ

Kalburgi : ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge statement on INDIA) ಅವರು, ಇಂಡಿಯಾ ಮೈತ್ರಿಕೂಟ (India alliance) ಒಟ್ಟಾಗಿರಲು ಪ್ರಯತ್ನ

ಮಾಡುತ್ತೇವೆ ಎಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾತನಾಡಿದ ಬಳಿಕ ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ

ಬ್ಯಾನರ್ಜಿ(Mamata Banerjee) ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇ‌ನೆ ಎಂದರು.

ಇಂಡಿಯಾ(INDIA) ಒಕ್ಕೂಟದಿಂದ ಎಲ್ಲರೂ ಸ್ಪರ್ಧೆ (competition) ಮಾಡಿದರೆ ಒಳ್ಳೆಯದಾಗಲಿದೆ ಎಂದು ಅವರು ಹೇಳಿದರು. ಭಾನುವಾರ ಡೆಹ್ರಾಡೂನ್​​ಗೆ ಹೋಗಿ ಮಾಹಿತಿ ಪಡೆದುಕೊಂಡು

ನಂತರ ಮಾತನಾಡುತ್ತೇನೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಮಾಹಿತಿಯಿಲ್ಲ. ಅವರು ರಾಜ್ಯಪಾಲರನ್ನು (Governor) ಭೇಟಿಯಾಗಿದ್ದಾರೋ

ಇಲ್ಲವೋ ಗೊತ್ತಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಒಗ್ಗಟ್ಟಾಗಿರಬೇಕು ಎಂದು ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಮಾಹಿತಿಯಿಲ್ಲ. ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಪ್ರಜಾಪ್ರಭುತ್ವ

ಉಳಿಯಬೇಕಾದರೆ ನಾವು ಒಗ್ಗಟ್ಟಾಗಿರಬೇಕು. ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದರು.

ಜೆಡಿಯು (JDU) ಮತ್ತು ಬಿಜೆಪಿ (BJP) ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ (Nitish Kumar) ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿದ್ದು,

ಟಿಎಂಸಿ ಏಕಾಂಗಿಯಾಗಿ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆ (Lok Sabha Elections) ಎದುರಿಸಲಿದೆ ಎಂಬ ಮಮತಾ ಹೇಳಿಕೆಗಳ ಬೆನ್ನಲ್ಲೇ ಖರ್ಗೆ ಈ ಹೇಳಿಕೆ ನೀಡಿದ್ದಾರೆ.

ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಮತಾ ಬ್ಯಾನರ್ಜಿ(Mamata Banerjee) ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ವಿಚಾರ ಶುಕ್ರವಾರ ಬಹಿರಂಗವಾಗಿತ್ತು. ಕಾಂಗ್ರೆಸ್ ನಾಯಕ

ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ನ್ಯಾಯ ಯಾತ್ರೆಯು ಬಂಗಾಳದಲ್ಲಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಅವರು ಹಲವಾರು ಕಾರ್ಯಕ್ರಮಗಳನ್ನು ಹೊಂದಿದ್ದಾರೆ.

ಅವುಗಳಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಬೇಕೆಂದು (Mallikarjuna Kharge statement on INDIA) ಕಾಂಗ್ರೆಸ್ ಬಯಸುತ್ತದೆ.

ಇಂಡಿಯಾ ಮೈತ್ರಿಕೂಟದ ನಾಯಕರಲ್ಲಿ ಬಿರುಕು ಮೂಡುತ್ತಿರುವುದು ಕಾಂಗ್ರೆಸ್​​ಗೆ ತಲೆನೋವಾಗಿ ಪರಿಣಮಿಸಿದ್ದು, ಬಿಜೆಪಿ (BJP) ವಿರುದ್ಧ ಒಗ್ಗಟ್ಟಿನಿಂದ ಹೋರಾಡುವುದಕ್ಕಾಗಿ ರಚನೆಯಾಗಿರುವ

ಮೈತ್ರಿಕೂಟದಲ್ಲೇ ಇದೀಗ ಅಪಸ್ವರಗಳು ಹೆಚ್ಚಾಗಿರುವುದು ಇತ್ತೀಚಿನ ಬೆಳವಣಿಗೆಗಳಿಂದ ಕಂಡುಬರುತ್ತಿದೆ. ಇದನ್ನು ಸರಿಪಡಿಸುವ ಹೊಣೆಗಾರಿಕೆ ಇದೀಗ ಖರ್ಗೆ ಮೇಲಿದ್ದು, ಆ ನಿಟ್ಟಿನಲ್ಲಿ ಅವರು

ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗುತ್ತಿದೆ.

Exit mobile version