ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್ ಕೂಗಿದ ವಿದ್ಯಾರ್ಥಿನಿ ಮುಸ್ಕಾನ್!

hijab

ಅಲ್ಲಾಹು ಅಕ್ಬರ್ ಎಂದು ಕೂಗಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಮಂಡ್ಯ(Mandya) ಜಿಲ್ಲೆಯ ವಿದ್ಯಾರ್ಥಿನಿ ಮುಸ್ಕಾನ್(Muskan) ಇದೀಗ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ವಿದೇಶಕ್ಕೆ(Tour) ಹಾರಿ ಮತ್ತೊಮ್ಮೆ ಸುದ್ದಿಯಾಗಿದ್ದಾಳೆ.


ಮಂಡ್ಯ ಜಿಲ್ಲೆಯ ನಿವಾಸಿಯಾದ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಕೂಗಿ ರಾಜ್ಯವಲ್ಲದೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದಳು. ಅನೇಕ ಮುಸ್ಲಿಂ ಮೂಲಭೂತವಾದಿ ಸಂಘಟನೆಗಳು ಅವಳನ್ನು ಸನ್ಮಾನಿಸಿದ್ದವು. ಅಲ್‌ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಕೂಡಾ ಮುಸ್ಕಾನ್‌ನನ್ನು ಹಾಡಿಹೊಗಳಿದ್ದ. ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಅನೇಕರು ಒತ್ತಾಯಿಸಿದ್ದರು. ಈ ಕುರಿತು ತನಿಖೆಯಾಗಬೇಕೆಂದು ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಅನೇಕರು ಆಗ್ರಹಿಸಿದ್ದರು.

ಹೀಗಾಗಿ ಮುಸ್ಕಾನ್ ಕುಟುಂಬದವರನ್ನು ರಾಜ್ಯ ಪೊಲೀಸರು ವಿಚಾರಣೆ ನಡೆಸಿದ್ದರು. ಪೊಲೀಸರಿಗೆ ಮಹಿತಿ ನೀಡದೆ ವಿದೇಶಕ್ಕೆ ಪ್ರವಾಸ ಹೋಗದಂತೆ ಸೂಚನೆ ನೀಡಿದ್ದರು ಎನ್ನಲಾಗಿದೆ.
ಸದ್ಯದ ಮಾಹಿತಿಯ ಪ್ರಕಾರ ಮುಸ್ಕಾನ್ ಮತ್ತು ಅವರ ಕುಟುಂಬ ಏಪ್ರಿಲ್ ೨೫ರಂದು ಸೌದಿ ಅರೇಬಿಯಾಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ತಮ್ಮ ಪ್ರವಾಸದ ಯಾವುದೇ ಮಾಹಿತಿಯನ್ನು ಸ್ಥಳೀಯ ಪೊಲೀಸರಿಗೆ ನೀಡಿಲ್ಲ. ಇದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಧಾರ್ಮಿಕ ಕಾರ್ಯಕ್ರಮದ ಹಿನ್ನಲೆಯಲ್ಲಿ ಮುಸ್ಕಾನ್ ಕುಟುಂಬ ಸೌದಿ ಅರೇಬಿಯಾಕ್ಕೆ ತೆರಳಿದೆ ಎನ್ನಲಾಗಿದೆ.

ಆದರೆ ಈ ಕುರಿತು ತನಿಖೆಯಾಗಬೇಕೆಂಬ ಒತ್ತಡ ಮತ್ತೆ ಪ್ರಾರಂಭವಾಗಿದೆ. ಮುಸ್ಕಾನ್ ಕುಟುಂಬ ಮಾಹಿತಿ ನೀಡದೆ ವಿದೇಶಕ್ಕೆ ತೆರಳಿರುವ ಸಂಗತಿ ಕುರಿತು ಪೊಲೀಸ್ ಇಲಾಖೆ ಯವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇನ್ನು ಮುಸ್ಕಾನ್ ಮಂಡ್ಯದಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದು, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಗೆ ಹಾಜರಾಗಿರಲಿಲ್ಲ.

Exit mobile version