Mandya Violence: Provide personal compensation to victims – Cheluvarayaswamy
Bengaluru: ನಾಗಮಂಗಲ ಗಲಭೆಯಲ್ಲಿ ಹಾನಿಗೊಳಗಾದ ಅಂಗಡಿಗಳು ಹಾಗೂ ಮನೆಗಳ ನಷ್ಟವನ್ನು ಅಂದಾಜಿಸಲಾಗುತ್ತಿದೆ. ಅವುಗಳ ಮಾಲೀಕರಿಗೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು. ಇದು ನನ್ನ ಸ್ವ ಕ್ಷೇತ್ರ, ನಷ್ಟ ಅನುಭವಿಸಿದವರಿಗೆ ವೈಯಕ್ತಿಕವಾಗಿಯೂ ಪರಿಹಾರ ಒದಗಿಸುವೆ ಎಂದು ಸಚಿವ ಚೆಲುವರಾಯಸ್ವಾಮಿ (Cheluvarayaswamy) ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನಾಗಮಂಗಲ (Mandya Violence) ಪಟ್ಟಣದ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದೇನೆ. ಈ ಸಂದರ್ಭದಲ್ಲಿ ಪ್ರತ್ಯಕ್ಷದರ್ಶಿಗಳು, ಅಂಗಡಿ ಮುಂಗಟ್ಟುಗಳು ಹಾಗೂ ಗ್ಯಾರೇಜ್ಗಳ ಮಾಲಿಕರು ಮತ್ತು ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು. ಈ ಘಟನೆ ನಡೆದಿರುವುದು ದುರದೃಷ್ಟಕರ. ಆಕಸ್ಮಿಕವಾಗಿ ನಡೆದ ಘಟನೆ, ನಂತರ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸುಮಾರು 54ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಪಾಲ್ಗೊಳ್ಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿಸಿಟಿವಿ (CCTV) ಪರಿಶೀಲಿಸಿ, ಖಚಿತಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ. ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆ ಇಲ್ಲ ಎಂದಿದ್ದಾರೆ.
ಕೋಮು ಸೌಹಾರ್ದತೆಯನ್ನು ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ಜನರಿಗೆ ಶಾಂತಿ ಸೌಹಾರ್ದತೆಯಿಂದ ಬದುಕುವ ವಾತಾವರಣ ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಂದಿನ ಎರಡು ದಿನಗಳಲ್ಲಿ ಮಂಡ್ಯ ಜಿಲ್ಲಾಧಿಕಾರಿ (Mandya District Collector), ಹಾಗೂ ಎಸ್.ಪಿ. ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಲಾಗಿದೆ.
ಈ ಘಟನೆಯನ್ನು ರಾಜಕೀಯವಾಗಿ ಬಳಸದೇ ವಿರೋಧ ಪಕ್ಷಗಳು ಸಹ ಜವಾಬ್ದಾರಿಯಿಂದ ವರ್ತಿಸಬೇಕು. ಹಾಗೆಯೇ, ಮಾಧ್ಯಮಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
Mandya Violence Latest News Today in Kannada
BENGALURU: The loss of shops and houses damaged in the Nagamangala riots is being estimated. It is our sole responsibility to provide justice to their owners. Minister Cheluvarayaswamy said that this is my own constituency and will provide personal compensation to those who have suffered loss.
Speaking about this, he visited the scene of the Mandya Violence in Nagamangala town and inspected it. On this occasion, the officials have been instructed to talk to the eyewitnesses, owners of shop fronts and garages and local residents, get information about the incident and take necessary action.
Many people have already been arrested in connection with this case. Strict action will be taken to punish the culprits. It is unfortunate that this incident happened. An accidental incident, which later led to a large-scale riot. Regarding the case So far more than 54 people have been arrested and if innocent people who were not involved in the incident have been arrested, they have been instructed to check the CCTV and confirm and release them. He said that there is no question of releasing the real culprits.
Our government will not tolerate anything that disturbs communal harmony. Our government is committed to provide an environment for our people to live in peace and harmony. In the next two days, Mandya District Collector, and S.P. An instruction has been given to hold a peace meeting under the leadership.
Opposition parties should also act responsibly and not use this incident politically. Also, I request the media to cooperate with us.