Nagamangala violence: State government is responsible for this incident, says Pralhad Joshi
Hubballi: ಮಂಡ್ಯ ಜಿಲ್ಲೆಯ (Mandya Voilence) ನಾಗಮಂಗಲದಲ್ಲಿ ನಿನ್ನೆ (ಸೆ.12) ಸಂಜೆ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Prahlad Joshi) ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ (Congress) ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕಿದೆ. ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಘಟನೆಗಳು ಆಗುತ್ತಿದೆ. ಗಣೇಶ ಮೂರ್ತಿ ಇದ್ದರೂ ಕಲ್ಲು ಹೊಡೆದು ಬೆಂಕಿ ಹಚ್ಚಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದ ಗಲಭೆ ಆಗಿದೆ. ನಾಗಮಂಗಲದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ ಸಂಭವಿಸಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರವೇ ಹೊಣೆ ಎಂದು ಘಟನೆ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಪ್ರತಿಕ್ರಿಯೆ ನೀಡಿದ ಅವರು ಆಕ್ರೋಶ ವ್ಯಕ್ತಪಡಿಸಿದರು.
ಏನಿದು ಪ್ರಕರಣ?
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ (Nagamangala) ಬುಧವಾರ ಸಂಜೆ ಗಣೇಶೋತ್ಸವ ಮೆರವಣಿಗೆ ವೇಳೆ ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ನಂತರ ಸಂಭವಿಸಿದ ಗಲಭೆಯಲ್ಲಿ ಅನೇಕ ಅಂಗಡಿಗಳು, ವಾಹನಗಳಿಗೆ ಹಾನಿಯಾಗಿದೆ. ಘಟನೆ ಸಂಬಂಧ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈವರೆಗೆ ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಸಚಿವರ ಜತೆ ಪೊಲೀಸ್ ಕಮಿಷನರ್ ಚರ್ಚೆ
ನಾಗಮಂಗಲದಲ್ಲಿ ಗಲಭೆ ಸಂಭವಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಭದ್ರತಾ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (B Dayanand) ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಭೇಟಿಯಾದರು.
ಗುರುವಾರ ಬೆಳಗ್ಗೆಯೇ ಗೃಹ ಸಚಿವರ ನಿವಾಸಕ್ಕೆ ಆಗಮಿಸಿದ ಪೊಲೀಸ್ ಆಯುಕ್ತ ಬಿ.ದಯಾನಂದ್ ಬೆಂಗಳೂರಿನ ಭದ್ರತೆ ಬಗ್ಗೆ ಮಾಹಿತಿ ನೀಡಿದರು. ನಾಗಮಂಗಲ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಭದ್ರತಾ ಸ್ಥಿತಿಗತಿಯ ಪರಿಶೀಲನೆ ನಡೆಸುತ್ತಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಖಂಡನೆ
ಮಂಡ್ಯದಲ್ಲಿ ಗಣೇಶ ವಿಸರ್ಜನೆಯ ಸಮಯದಲ್ಲಿ ಅನ್ಯಕೋಮಿನವರು ಮತ್ತೊಮ್ಮೆ ತಮ್ಮ ದುರ್ಬುದ್ದಿ, ದುಷ್ಟತನ ತೋರಿದ್ದಾರೆ. ನಾಗಮಂಗಲದ (Nagamangala) ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಕಲ್ಲುತೂರಿರುವುದು ಇವರ ರೋಗಗ್ರಸ್ಥ ಮನಃಸ್ಥಿತಿ ತೋರಿಸುತ್ತದೆ. ಗಣೇಶನ ಪ್ರಸಾದ ತಯಾರು ಮಾಡಲು ನಿಯಮಾವಳಿ ರೂಪಿಸಿದ ಸರ್ಕಾರ ಯಾರಿಗೂ ತೊಂದರೆ ಕೊಡದೆ ಗಣಪತಿ ವಿಸರ್ಜನೆಯ ಮೆರವಣಿಗೆಯ ಮೇಲೆ ಕಲ್ಲು ತೂರುವವರ ಮೇಲೆ ಏನು ಕ್ರಮ ತೆಗೆದುಕೊಳ್ಳುತ್ತದೆ? ಕಲ್ಲು ತೂರಿದ ಪುಂಡರ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿ ಶಿಕ್ಷಿಸಬೇಕು ಹಾಗೂ ಕಲ್ಲುತೂರಾಟವನ್ನು ಪ್ರಚೋದಿಸಿದ ಪಟ್ಟಭದ್ರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ಹೇಳಿದ್ದಾರೆ.