Visit Channel

ಮನೆಯೊಂದಕ್ಕೆ ಕನ್ನ ಹಾಕಿದ ದರೋಡೆಕೋರರು

IMG-20201221-WA0002

ಬೆಳ್ತಂಗಡಿ, ಡಿ. 21: ಮನೆಯೊಂದಕ್ಕೆ ದರೋಡೆಕೊರರು ನುಗ್ಗಿ ನಗನಗದು ದರೋಡೆ ಮಾಡಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನಡೆದಿದೆ.

ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ಸುಮಾರು 2-30 ಗಂಟೆಯ ಮಧ್ಯ ರಾತ್ರಿ ನುಗ್ಗಿ ಮನೆಯ ಯಜಮಾನ ಮತ್ತು ಅವರ‌ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ಮೌಲ್ಯದ ನಗನಗದು ದೋಚಿದ ಘಟನೆ ನಡೆದಿದೆ.

ಒಂಭತ್ತು ಮಂದಿ ಇದ್ದ ದರೋಡೆಕೋರರ ತಂಡ ಇವರನ್ನು ಸ್ಥಳದಲ್ಲೆ ಕೂಡಿ ಹಾಕಿ ಹಲ್ಲೆ ನಡೆಸಿದ ಸಂದರ್ಭ ತುಕ್ರಪ್ಪ ಶೆಟ್ಟಿ ಯವರ ಪತ್ನಿಗೆ ಚೂರಿಯಿಂದ ಹೊಟ್ಟೆಗೆ ಎರಡು ಬಾರಿ ಇರಿದಿದ್ದು, ತೀವ್ರ ಗಾಯಗಳಾಗಿವೆ. ಕೂಡಲೇ ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಮನೆಯಲ್ಲಿ ಪತಿ , ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಈ ಸಂದರ್ಭದಲ್ಲಿ ಇದ್ದುದರಿಂದ ಇವರನ್ನೆಲ್ಲ ಮಾರಕಾಸ್ತ್ರ ತೋರಿಸಿ ಬೆದರಿಸಿ ಕೂಡಿ ಹಾಕಿ ಈ ದರೋಡೆ ನಡೆಸಿದ್ದು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ಡಕಾಯಿತರ ತಂಡ ಪರಾರಿಯಾಗಿದೆ. ಡಕಾಯಿತರು ತೆರಳುತ್ತಲೆ ಮನೆಯವರು ಧರ್ಮಸ್ಥಳ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಕೂಡಲೆ ಪೋಲೀಸ್ ಅಧಿಕಾರಿಗಳು ಘಟನೆ ನಡೆದ ಮನೆಗೆ ಧಾವಿಸಿದ್ದಾರೆ.

ಸ್ಥಳೀಯವಾಗಿ ವಿಶ್ವಹಿಂದೂ ಪರಿಷತ್ ನ ಕೊಕ್ಕಡ ವಲಯ ಅದ್ಯಕ್ಷರಾಗಿದ್ದ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಈ ದರೋಡೆ ಕೋರರು ನುಗ್ಗಿದ ವಿಷಯ ತಿಳಿಯುತ್ತಲೆ ನೂರಾರು ಮಂದಿ ಆಗಮಿಸಿದ್ದಾರೆ.ದರೋಡೆ ಕೋರರ ತಂಡದಲ್ಲಿ ಮನೆಯೊಳಗೆ ನುಗ್ಗಿದವರು ಅಂದಾಜು ಒಂಭತ್ತು ಮಂದಿಯಷ್ಟಿದ್ದು ದರೋಡೆ ನಡೆಸಿ ಪರಾರಿಯಾಗಬಹುದಾದ ಎಲ್ಲಾ ರಸ್ತೆಗಳನ್ನು ನಾಕಾಬಂದಿ ಹಾಕಿ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.