ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಬಾರ್‌ ಕೌನ್ಸಿಲ್‌ನಿಂದ ರಾಜೇಶ್‌ ಅಮಾನತು

ಬೆಂಗಳೂರು ಅ 25 : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ಅವರನ್ನು ಕರ್ನಾಟಕ ರಾಜ್ಯಬಾರ್‌ ಕೌನ್ಸಿಲ್ (ಕೆಎಸ್‌ಬಿಸಿ) ಸದಸ್ಯತ್ವದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮಂಗಳೂರಿನ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ರಾಜೇಶ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿದೆ. ಹೀಗಾಗಿ ಗಂಭೀರ ಆರೋಪ ಎದುರಿಸುತ್ತಿರುವ ನ್ಯಾಯವಾದಿಯನ್ನು ಬಾರ್‌ ಕೌನ್ಸಿಲ್ ಅಧ್ಯಕ್ಷ ಶ್ರೀನಿವಾಸ ಬಾಬು ನೇತೃತ್ವದ ಸಮಿತಿ ಅಮಾನತುಗೊಳಿಸಿದೆ. ರಾಜೇಶ್ ವಿರುದ್ಧ ಆರೋಪದ ಎಫ್‌ಐಆರ್ ಹಾಗೂ ದೂರುಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕರಂಗಲ್ಪಾಡಿಯಲ್ಲಿ ಕಚೇರಿಯನ್ನು ಹೊಂದಿರುವ ಕೆಎಸ್ಎನ್ ರಾಜೇಶ್ ಅವರು 2001ರಲ್ಲಿ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿದ್ದರು. ರಾಜೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನ್ಯಾಯವಾದಿಗಳ ಕಾಯ್ದೆಯ 35ನೇ ಸೆಕ್ಷನ್ ಅಡಿ ಮುಂದಿನ ಆದೇಶದ ವರೆಗೆ ಈ ಅಮಾನತು ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಬಾರ್ ಕೌನ್ಸಿಲ್‌ನಿಂದ ರಾಜೇಶ್ ಅಮಾನತುಗೊಂಡಿದ್ದರಿಂದ ಪೊಲೀಸ್ ತನಿಖೆ ಪೂರ್ತಿಗೊಳ್ಳುವ ವಡೆಗೆ ಮತ್ತು ಬಾರ್ ಕೌನ್ಸಿಲ್ ಈ ಬಗ್ಗೆ ಮುಂದಿನ ಆದೇಶ ನೀಡುವ ವರೆಗೆ ನ್ಯಾಯಾಲಯದಲ್ಲಿ ವಕಾಲತು ವಹಿಸುವ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ

ಇಬ್ಬರು ಅಧಿಕಾರಿಗಳ ಸಸ್ಪೆಂಡ್ : ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಹಿತಿ ನಿಡದೆ ಕರ್ತವ್ಯಲೋಪ ಎಸಗಿದ ಆರೋಪದಡಿ ಇಬ್ಬರು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಎನ್, ಶಶಿಕುಮಾರ್, ಕಾನೂನು ವಿದ್ಯಾರ್ಥಿನಿ ವಕೀಲರೊಬ್ಬರಿಂದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ಸಂತ್ರಸ್ತೆಯ ಸ್ನೇಹಿತೆಯ ದೂರಿನ ಮೇರೆಗೆ ಎಸಿಪಿ(ಸೆಂಟ್ರಲ್) ಪಿ.ಎ. ಹೆಗ್ಡೆ ಅವರ ಪ್ರಾಥಮಿಕ ತನಿಖೆಯ ಆಧಾರದಲ್ಲಿ, ಉರ್ವ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಲಾ ಹಾಗೂ ಎಚ್‌ಸಿ ಪ್ರಮೋದ್ ಅವರನ್ನು ಅ. 21ರಂದು ಇಲಾಖಾ ‘ಶಿಸ್ತು ಕ್ರಮ ಭಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಉರ್ವ ಭಾಷೆಯ ಪಿಐ ಭಾರತಿಯವರಿಗೆ ಕಾರಣ ಕೇಳಿ ನೊಟಿಸ್ ಜಾರಿಗೊಳಿಸಲಾಗಿದೆ ಎಂದು ಅವರು ಮಾಹಿತಿನೀಡಿದರು.

Exit mobile version