download app

FOLLOW US ON >

Monday, August 8, 2022
Breaking News
ನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!
English English Kannada Kannada

ಹಂತಕರು 7 ಮಂದಿಯ ಲಿಸ್ಟ್‌ ಮಾಡಿ, ಕೊನೆಗೆ ಫಾಝಿಲ್‌ನನ್ನು ಹತ್ಯೆ ಮಾಡಿದರು : ಮಂಗಳೂರು ಪೊಲೀಸ್

ಹಂತಕರು ಒಟ್ಟು ಏಳು ಮಂದಿಯ ಒಂದು ಪಟ್ಟಿಯನ್ನು ಸಿದ್ದಪಡಿಸಿಕೊಂಡು, ಅಂತಿಮವಾಗಿ ಫಾಝಿಲ್‌ನನ್ನು(Fazil) ಹತ್ಯೆ(Murder) ಮಾಡಿದರು ಎಂದು ಮಂಗಳೂರು ಪೊಲೀಸರು(Mangaluru Police) ತಿಳಿಸಿದ್ದಾರೆ.
Mangaluru

ಮಂಗಳೂರು : ಮಂಗಳೂರಿನ(Mangaluru) ಸುರತ್ಕಲ್ನಲ್ಲಿ(Suratkal) ನಡೆದ ಅಲ್ಪಸಂಖ್ಯಾತ ಸಮುದಾಯದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಹಂತಕರು ಒಟ್ಟು ಏಳು ಮಂದಿಯ ಒಂದು ಪಟ್ಟಿಯನ್ನು ಸಿದ್ದಪಡಿಸಿಕೊಂಡು, ಅಂತಿಮವಾಗಿ ಫಾಝಿಲ್‌ನನ್ನು(Fazil) ಹತ್ಯೆ(Murder) ಮಾಡಿದರು ಎಂದು ಮಂಗಳೂರು ಪೊಲೀಸರು(Mangaluru Police) ತಿಳಿಸಿದ್ದಾರೆ.
ಬೆಳ್ಳಾರೆಯಲ್ಲಿ ಬಿಜೆಪಿ(BJP) ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು(Praveen Nettaru) ಹತ್ಯೆಯಾದ ಬೆನ್ನಲ್ಲೇ ಜುಲೈ 28ರಂದು ನಡೆದ ಈ ಕೊಲೆ ಜಿಲ್ಲೆಯಾದ್ಯಂತ ತಲ್ಲಣ ಮೂಡಿಸಿತ್ತು.

Mangaluru

ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಈ ಹತ್ಯೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಇನ್ನು ಫಾಝಿಲ್‌ ಹತ್ಯೆಯ ಕುರಿತು ವಿವರ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್(N Shahsikumar), ಬಂಧಿತರು ಸುರತ್ಕಲ್ ಮೂಲದವರು. ಆರೋಪಿಗಳು ಬಳಸುತ್ತಿದ್ದ ಕಾರಿನ ಮಾಲೀಕ ಅಜಿತ್ ಕ್ರಾಸ್ತಾ ಅವರನ್ನು ಮೊದಲು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಆತ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.

ಮಂಗಳವಾರ ಮುಂಜಾನೆ ಉದ್ಯಾವರ ಬಳಿ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಎಲ್ಲ ಆರು ಆರೋಪಿಗಳು ಕೊಲೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇನ್ನು ಹಂತಕರು ಆರಂಭದಲ್ಲಿ ತಮ್ಮ ಗುರಿ ಯಾರಾಗಿರಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ. ಏಳು ಜನರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಅಂತಿಮವಾಗಿ ಫಾಜಿಲ್ ಅನ್ನು ಹತ್ಯೆ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಹತ್ಯೆಯ ಹಿಂದಿನ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

Praveen nettar

ಫಾಝಿಲ್‌ನನ್ನೇ ಯಾಕೆ ಆಯ್ಕೆ ಮಾಡಿಕೊಂಡರು ಎಂಬುದರ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article