download app

FOLLOW US ON >

Tuesday, January 25, 2022
English English Kannada Kannada

ಮಣಿಪುರದಲ್ಲಿ 2 ಹಂತದಲ್ಲಿ ಚುನಾವಣೆ

ಮಣಿಪುರದ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 27ರಂದು ಮೊದಲ ಹಂತದ ಚುನಾವಣೆ ನಡೆದರೆ, ಮಾರ್ಚ್ 3ರಂದು ಎರಡನೇ ಹಾಗೂ ಕೊನೆಯ ಹಂತದ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಮಣಿಪುರದ ಜೊತೆಗೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮಣಿಪುರ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಣಿಪುರದಲ್ಲಿ ಮೊದಲ ಹಂತದ ಚುನಾವಣೆ ಫೆಬ್ರವರಿ 1ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಫೆಬ್ರವರಿ 8 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಫೆಬ್ರವರಿ 11 ಕೊನೆಯ ದಿನಾಂಕವಾಗಿರುತ್ತದೆ. ಫೆಬ್ರವರಿ 27ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಮಣಿಪುರದ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 27ರಂದು ಮೊದಲ ಹಂತದ ಚುನಾವಣೆ ನಡೆದರೆ, ಮಾರ್ಚ್ 3ರಂದು ಎರಡನೇ ಹಾಗೂ ಕೊನೆಯ ಹಂತದ ಚುನಾವಣೆ ನಡೆಯಲಿದೆ. ಮಾರ್ಚ್ 10ರಂದು ಮಣಿಪುರದ ಜೊತೆಗೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಇನ್ನು ಎರಡನೇ ಹಂತದ ಚುನಾವಣೆಯಲ್ಲಿ ಫೆಬ್ರವರಿ 4ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಫೆಬ್ರವರಿ 11 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 14ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಫೆಬ್ರವರಿ 16 ಕೊನೆಯ ದಿನಾಂಕವಾಗಿರುತ್ತದೆ. ಮಾರ್ಚ್ 3ರಂದು ಎರಡನೇ ಹಂತದ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp

Submit Your Article